ಕೊಲೆ ಪ್ರಕರಣ: ಇಬ್ಬರು ಖುಲಾಸೆ
ಪುತ್ತೂರು: ಕಳೆದ ಮೂರು ವರ್ಷಗಳ ಹಿಂದೆ ಕಡಬದಲ್ಲಿ ನಡೆದ ಕೊಲೆ ಪ್ರಕರಣವೊಂದರ ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.
2011ರ ಫೆ. 8 ರಂದು ಕಡಬ ಹಳೆ ಸ್ಟೇಷನ್ ಬಳಿಯ ನಿವಾಸಿ ಅಬ್ದುಲ್ ರಫೀಕ್ (42) ಎಂಬವರನ್ನು ಅವರ ಪತ್ನಿ ರುಕ್ಯಾ ಮತ್ತು ಆಕೆಯ ಪ್ರಿಯಕರ ಕೋಡಿಂಬಾಳದ ಮಹಮ್ಮದ್ ಶರೀಫ್ ಎಂಬವರು ಸೇರಿಕೊಂಡು ಕೊಲೆ ನಡೆಸಿರುವುದಾಗಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಕೊಲೆಯಾದ ರಫೀಕ್ ಅವರ ಸಹೋದರ ಅಬ್ದುಲ್ ರಶೀದ್ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸರು ತನಿಖೆ ನಡೆಸಿ ರುಕ್ಯಾ ಹಾಗೂ ಆಕೆಯ ಪ್ರಿಯಕರ ಶರೀಫ್ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿ, ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಪ್ರಕರಣದ ವಿಚಾರಣೆಯನ್ನು ಆಲಿಸಿದ ನ್ಯಾಯಾಲಯವು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಆರೋಪಿಗಳಿಬ್ಬರನ್ನು ಖುಲಾಸೆಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

