ರಸ್ತೆ ಡಾಂಬರೀಕರಣಕ್ಕೆ ಪ್ಲಾಸ್ಟಿಕ್ ತ್ಯಾಜ್ಯ ಬಳಕೆಗೆ ಸಂಶೋಧನೆ
ಮಂಗಳೂರು: ಪ್ಲಾಸ್ಟಿಕ್ ತ್ಯಾಜ್ಯಗಳನ್ನು ರಸ್ತೆ ಡಾಮರೀಕರಣಕ್ಕೆ ಬಳಸುವ ಕುರಿತ ಸಂಶೋಧನೆ ನಡೆಯುತ್ತಿದೆ. ಆ ಯೋಜನೆಗಾಗಿ ಬೆಳ್ಳಾರೆಯಲ್ಲಿ 1.60 ಎಕರೆ ಜಾಗ ಖರೀದಿಸಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಹೇಳಿದ್ದಾರೆ.
ಸಂಶೋಧನೆ ಖಾಸಗಿ ಸಹಭಾಗಿತ್ವದಲ್ಲಿ ಕೆಲಸ ಆರಂಭಿಸಲಾಗುವುದು ಎಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಮುಕ್ತಗೊಳಿಸುವ ಸಂಕಲ್ಪ ಇದೆ. ಆದರೆ ಇದು ದೊಡ್ಡ ಸವಾಲು. ಎಲ್ಲ ಗ್ರಾಮ ಪಂಚಾಯ್ತಿಗಳ ನೆರವು ಪಡೆಯಲಾಗುವುದು ಎಂದರು.
ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ತ್ಯಾಜ್ಯದಿಂದ ಸಾವಯವ ಗೊಬ್ಬರ ಮಾಡುವ ಯೋಜನೆ ರೂಪಿಸಲಾಗುವುದು.
ಕೋಳಿ ತ್ಯಾಜ್ಯವನ್ನು ನದಿ, ತೊರೆಗಳಿಗೆ ಎಸೆಯುವುದನ್ನು ನಿಲ್ಲಿಸಿ, ತ್ಯಾಜ್ಯಗಳಿಂದ ಜನರೇ ಗೊಬ್ಬರ ತಯಾರಿಸಿ, ಬೆಳೆಗಳಿಗೆ ಹಾಗಿ. ಈ ಮೂಲಕ ಕುಡಿಯುವ ನೀರು ಕಲುಷಿತವಾಗುವುದನ್ನು ತಪ್ಪಿಸಿ. ಈ ರೀತಿ ಮಾಡುವ ಸ್ವಾವಲಂಬಿ ಗ್ರಾಮಗಳಿಗೆ ಪ್ರಶಸ್ತಿ ನೀಡಲಾಗುವುದು.
ತ್ಯಾಜ್ಯ ಸಮಸ್ಯೆ ಪರಿಹರಿಸಲು ಗ್ರಾಮ ಸ್ನೇಹಿತ ಯೋಜನೆ ಜಾರಿಗೆ ತರಲಾಗುವುದು. 5 ತಾಲೂಕುಗಳಲ್ಲಿ 30 ಅಧಿಕಾರಿಗಳನ್ನು ನಿಯುಕ್ತಿಗೊಳಿಸಲಾಗುವುದು ಎಂದರು.
20 ಲಕ್ಷ: ಘನತ್ಯಾಜ್ಯ ನಿರ್ವಹಣೆಗೆ ರಾಜ್ಯ ನೀರು ಮತ್ತು ನೈರ್ಮಲ್ಯ ಮಿಶನ್ ನಿರ್ಮಲ ಭಾರತ್ ಅಭಿಯಾದಡಿ 21 ಗ್ರಾಮ ಪಂಚಾಯ್ತಿಗಳಿಗೆ ತಲಾ 20 ಲಕ್ಷ ಅನುದಾನ ಲಭಿಸಿದೆ. ನೀರು ಸಮಸ್ಯೆ ಪರಿಹರಿಸಲು ಬಹುಗ್ರಾಮ ಯೋಜನೆ ಜಾರಿಗೆ ತರುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಅಧ್ಯಕ್ಷೆ ಶೈಲಜಾ ಭಟ್ ಇದ್ದರು.
ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ತ್ಯಾಜ್ಯದಿಂದ ಸಾವಯವ ಗೊಬ್ಬರ ಮಾಡುವ ಯೋಜನೆ ರೂಪಿಸಲಾಗುವುದು. ಕೋಳಿ ತ್ಯಾಜ್ಯವನ್ನು ನದಿ, ತೊರೆಗಳಿಗೆ ಎಸೆಯುವುದನ್ನು ನಿಲ್ಲಿಸಿ, ತ್ಯಾಜ್ಯಗಳಿಂದ ಜನರೇ ಗೊಬ್ಬರ ತಯಾರಿಸಿ, ಬೆಳೆಗಳಿಗೆ ಹಾಗಿ. ಈ ಮೂಲಕ ಕುಡಿಯುವ ನೀರು ಕಲುಷಿತವಾಗುವುದನ್ನು ತಪ್ಪಿಸಿ. ಈ ರೀತಿ ಮಾಡುವ ಸ್ವಾವಲಂಬಿ ಗ್ರಾಮಗಳಿಗೆ ಪ್ರಶಸ್ತಿ ನೀಡಲಾಗುವುದು.
ಆಶಾ ತಿಮ್ಮಪ್ಪ, ಅಧ್ಯಕ್ಷೆ, ಜಿಲ್ಲಾ ಪಂಚಾಯಿತಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

