ಕಡಲು ಕೊರೆತ ಶಾಶ್ವತ ಪರಿಹಾರ ಮಾಡಿ
ಮಂಗಳೂರು: ಹಲವು ವರ್ಷಗಳಿಂದ ಕಡಲ್ಕೊರೆತ ಪ್ರದೇಶಕ್ಕೆ ಸಚಿವರು, ಶಾಸಕರು ಭೇಟಿ ನೀಡಿ ಭರವಸೆ ನೀಡುತ್ತಾರೆಯೇ ಹೊರತು ಶಾಶ್ವತ ಪರಿಹಾರಕ್ಕೆ ಮುಂದಾಗುತ್ತಿಲ್ಲ ಎಂದು ಉಳ್ಳಾಲ ಕಡಲ್ಕೊರೆತ ಸಂತ್ರಸ್ತರು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಎದುರು ಅಳಲು ತೋಡಿಕೊಂಡಿದ್ದಾರೆ.
ಮಂಗಳವಾರ ಉಳ್ಳಾಲದ ಕಡಲ್ಕೊರೆತ ಪ್ರದೇಶಕ್ಕೆ ಸಚಿವ ರೈ ಭೇಟಿ ನೀಡಿದಾಗ ಸಂತ್ರಸ್ತರು ಇನ್ನಾದರೂ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದರು.
ಕಳೆದ ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸವಿದ್ದೇವೆ. ಕಡಲ್ಕೊರೆತದಿಂದ ಮನೆಗಳು ಅಪಾಯದಲ್ಲಿದ್ದರೂ ಕೇಳುವವರಿಲ್ಲ. ಈ ಬಾರಿ 7 ಮನೆ ಕಡಲು ಸೇರಿದ್ದು, ನಾವು ಬೀದಿ ಪಾಲಾಗಿದ್ದೇವೆ. ಇಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸದ ಕಾರಣ ಸಿಗಡಿ ಕಾರ್ಖಾನೆಯಲ್ಲಿ 40ಕ್ಕೂ ಅಧಿಕ ಮಂದಿ ಒಂದು ವಾರದಿಂದ ವಾಸವಿದ್ದೇವೆಎಂದು ಸಂತ್ರಸ್ತರು ಅಹವಾಲು ಹೇಳಿದರು.
ಇಲ್ಲಿ ಸೋಮವಾರದಿಂದ ಗಂಜಿ ಕೇಂದ್ರ ಆರಂಭಿಸುವುದಾಗಿ ಪುರಸಭೆ ಅಧಿಕಾರಿಕಾರಿಗಳು ಹೇಳಿಹೋಗಿದ್ದಾರೆ. ಮನೆ ಕಳೆದುಕೊಂಡವರಿಗೆ ಅತ್ಯಲ್ಪ ಪರಿಹಾರ ಬದಲು ಶಾಶ್ವತ ಪರಿಹಾರ ನೀಡುವಂತೆ ಮಹಿಳೆಯರು ಆಗ್ರಹಿಸಿದರು. ಸಂತ್ರಸ್ತರಿಗೆ ರು. 25 ಸಾವಿರ ಪರಿಹಾರ ನೀಡುವುದಾಗಿ ಸಚಿವರು ತಿಳಿಸಿ ಸ್ಥಳದಿಂದ ನಿರ್ಗಮಿಸಿದರು.
ಕಡಲ್ಕೊರೆತ ಸಿಆರ್ಝಡ್ ವ್ಯಾಪ್ತಿಗೆ ಬರುತ್ತದೆ. ಆದರೆ ಈ ಪ್ರದೇಶದಲ್ಲಿ ನೂರಾರು ಮಂದಿ ವಾಸವಿದ್ದಾರೆ. ಈ ಹಿನ್ನೆಲೆಯಲ್ಲಿ ಕಡಲ್ಕೊರೆತಕ್ಕೆ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದಕ್ಕೆ ರು. 273 ಕೋಟಿ ಮೀಸಲಿರಿಸಿದ್ದು, ಪ್ರಥಮ ಹಂತದ ಕಾಮಗಾರಿ ಮೊಗವೀರ ಪಟ್ಣದಲ್ಲಿ ಆರಂಭವಾಗಿದೆ. ಸಂಪೂರ್ಣ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಕೊನೆಗೊಳ್ಳಬೇಕಾಗಿದೆ ಎಂದು ಸಚಿವ ರಮಾನಾಥ ರೈ ಹೇಳಿದರು.
ಸಚಿವರು ಹಿಲರಿ ನಗರ, ಮೊಗವೀರಪಟ್ಣ, ಸೋಮೇಶ್ವರ ಉಚ್ಚಿಲಕ್ಕೆ ಭೇಟಿ ನೀಡಿದರು.
ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ತಹಸೀಲ್ದಾರ್ ಗುರುಪ್ರಸಾದ್, ಪುರಸಭೆ ಅಧ್ಯಕ್ಷೆ ಗಿರಿಜಾ ಬಾಯಿ, ಸದಸ್ಯರಾದ ಫಾರೂಕ್ ಉಳ್ಳಾಲ್, ಕುಂಞಮೋನು, ಬಾಜಿಲ್ ಡಿಸೋಜ, ಮಹಮ್ಮದ್ಮುಕ್ಕಚ್ಚೇರಿ, ಸೂರ್ಯಕಲಾ, ಡಿಸಿಸಿ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲು ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

