ನಟಿ ಮನೆ ದರೋಡೆ ಸಂಚು: ಇಬ್ಬರ ಸೆರೆ
ಬಂಟ್ವಾಳ: ಕನ್ನಡ ಚಿತ್ರನಟಿಗೆ ಸೇರಿದ ಸಾಲೆತ್ತೂರಿನ ಮನೆಯಲ್ಲಿ ದರೋಡೆಗೆ ಸ್ಕೆಚ್ ರೂಪಿಸುತ್ತಿದ್ದ ಈರ್ವರನ್ನು ಖಚಿತ ಮಾಹಹಿತಿ ಮೇರೆಗೆ ಸಿಸಿಬಿ ಪೊಲೀಸರು ಮಂಗಳವಾರ ಸಂಜೆ ಮಂಗಳೂರಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಬಜಗೋಳಿ ನಿವಾಸಿ ರವಿ, ಮಂಗಳೂರು ನಿವಾಸಿ ಮಂಜುಳಾ ಹಾಗೂ ಹರೀಶ್ ಎಂದು ಗುರುತಿಸಲಾಗಿದೆ.
ಜುಗಾರಿ ಆಡುತ್ತಿದ್ದವರು ಪೊಲೀಸ್ ವಶಕ್ಕೆ
ಮಂಗಳೂರು: ಜುಗಾರಿ ಆಡುತ್ತಿದ್ದ 17 ಮಂದಿಯನ್ನು ಬಂದರು ಪೊಲೀಸರು ಮಂಗಳವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ನಗರದ ಕೆ. ಎಸ್. ರಾವ್ ರಸ್ತೆಯ ಲಾಡ್ಜ್ ಒಂದರಲ್ಲಿ ಆರೋಪಿಗಳು ಜುಗಾರಿ ಆಡುತ್ತಿದ್ದು, ಅವರಿಂದ ರು. 42 ಸಾವಿರ ವಶಕ್ಕೆ ಪಡೆದಿದ್ದಾರೆ.
ಅನುರಾಧಾ ಕುರುಂಜಿ ಆಯ್ಕೆ
ಸುಳ್ಯ: ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ 'ನಮ್ಮೂರ ಜಾನಪದ ಯೋಜನೆ' ಕಾರ್ಯಯೋಜನೆಯಡಿ ಕರ್ತವ್ಯ ನಿರ್ವಹಿಸಲು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ ಅನುರಾಧಾ ಕುರುಂಜಿ ಆಯ್ಕೆಯಾಗಿದ್ದಾರೆ. ನಾಡಿನ ಎಲ್ಲ ಭಾಗದ ಕೆಲವು ಹಳ್ಳಿಗಳನ್ನು ಪ್ರಾತಿನಿಧಿಕವಾಗಿ ಆಯ್ಕೆ ಮಾಡಿಕೊಂಡು ಆ ಊರಿನ ಒಟ್ಟು ಜಾನಪದ ಚಿತ್ರಣ ಕಟ್ಟಿಕೊಡುವ ನಿಟ್ಟಿನಲ್ಲಿ ಹಮ್ಮಿಕೊಂಡ ಯೋಜನೆಯಿದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

