ದಕ್ಷಿಣ ಕನ್ನಡ

ಕಟೀಲು ಬಸ್ ನಿಲ್ದಾಣ ಸಮೀಪ ಕಸ ರಾಶಿ

Published On :

ಮೂಲ್ಕಿ: ಕಟೀಲಿನಲ್ಲಿ ತ್ಯಾಜ್ಯ ಸಮಸ್ಯೆ ತಾರಕಕ್ಕೇರಿದ್ದು ಕಟೀಲು ಬಸ್ ನಿಲ್ದಾಣದ ಸಮೀಪದಲ್ಲಿ ಕಸದ ರಾಶಿ ಸಂಗ್ರಹವಾಗಿದೆ.
ಮೆನ್ನಬೆಟ್ಟು ಪಂಚಾಯಿತಿ ವ್ಯಾಪ್ತಿಯ ಕಟೀಲು ಬಸ್ ನಿಲ್ದಾಣ ಪ್ರದೇಶದಲ್ಲಿ ಅಲ್ಲಿನವರು ಹಾಗೂ ಹೊರಗಿನವರು ಕಸ ತಂದು ಹಾಕುತ್ತಿದ್ದಾರೆ. ಜಿಲ್ಲಾಧಿಕಾರಿ ಕಟೀಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಟೀಲು ಬಸ್ ನಿಲ್ದಾಣದ ಸಮೀಪ ಸಂಗ್ರಹವಾಗಿದ್ದ ತ್ಯಾಜ್ಯದ ರಾಶಿ ಕಂಡು ಕೂಡಲೇ ವಿಲೇವಾರಿ ಮಾಡುವಂತೆ ಮೆನ್ನಬೆಟ್ಟು ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಮೂಲ್ಕಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 1.9 ಎಕ್ರೆ ಪ್ರದೇಶದಲ್ಲಿ ಡಂಪಿಂಗ್ ಯಾರ್ಡ್ ಇದ್ದು ಮನೆ ಮನೆಯಿಂದ ಕಸ ಸಂಗ್ರಹಿಸುವ ಮೂಲಕ ಹಾಗೂ ಡಂಪಿಂಗ್ ಯಾರ್ಡ್‌ನಲ್ಲಿ ಪ್ಲಾಸ್ಟಿಕ್ ಸೇರಿದಂತೆ ಪ್ರತ್ಯೇಕ ವಿಂಗಡಣೆ, ಎರೆಹುಳ ಗೊಬ್ಬರ ತಯಾರಿ ಸೇರಿದಂತೆ ಉತ್ತಮ ರೀತಿಯಲ್ಲಿ ನಿರ್ವಹಣೆಯಾಗುತ್ತಿದ್ದು ಜಿಲ್ಲಾ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಅತ್ಯುತ್ತಮ ಪಟ್ಟಣ ಪಂಚಾಯಿತಿ ಪ್ರಶಸ್ತಿ ಪಡೆದಿದೆ.
ಕಟೀಲು ಕ್ಷೇತ್ರ ಸೇರಿದಂತೆ ಬೆಳೆಯತ್ತಿರುವ ಮೆನ್ನಬೆಟ್ಟು ಪಂಚಾಯಿತಿ ಹಾಗೂ ಸಮೀಪದ ಕಿನ್ನಿಗೋಳಿ ಪಂಚಾಯಿತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಡಂಪಿಂಗ್ ಯಾರ್ಡ್ ಸೇರಿದಂತೆ ಯಾವುದೇ ವ್ಯವಸ್ಥೆಯಿಲ್ಲದಿರುವುದರಿಂದ ಕಸವನ್ನು ಅಲ್ಲಲ್ಲಿ ರಾಶಿ ಹಾಕುತ್ತಿದ್ದು ಇದರಿಂದ ಸಮಸ್ಯೆಯಾಗಿದೆ.
ಕಿನ್ನಿಗೋಳಿ ಮತ್ತು ಮೆನ್ನಬೆಟ್ಟು ಪಂಚಾಯಿತಿ ಜೊತೆಗೂಡಿ ತ್ಯಾಜ್ಯ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಮಾಡದಿದ್ದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾದ್ಯತೆಯಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.