ದಕ್ಷಿಣ ಕನ್ನಡ

ಸಸಿಹಿತ್ಲು ದೇವಾಲಯ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Published On :

ಮೂಲ್ಕಿ: ಮಾ.9ರಂದು ಬ್ರಹ್ಮಕಲಶೋತ್ಸವ ಜರುಗಲಿರುವ ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದಲ್ಲಿ ತೋರಣ ಮುಹೂರ್ತಕ್ಕೆ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಗನ್ನಾಥ ಸಾಲ್ಯಾನ್ ಚಾಲನೆ ನೀಡಿದರು.
ಉಗ್ರಾಣ ಮುಹೂರ್ತದ ಉದ್ಘಾಟನೆಯನ್ನು ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮೀಕಾಂತ್ ತೋನ್ಸೆ ನೆರವೇರಿಸಿದರು. ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ, ಆಡಳಿತ ಸಮಿತಿ ಅಧ್ಯಕ್ಷ ವಾಮನ್ ಇಡ್ಯಾ ಮತ್ತು ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಇದ್ದರು.
ವೇದಮೂರ್ತಿ ಕೃಷ್ಣಮೂರ್ತಿ ಭಟ್ ಹೊಯಿಗೆಗುಡ್ಡೆ ನೇತೃತ್ವದಲ್ಲಿ ಬೆಳಗ್ಗೆ ಖುತ್ವಿಜರ ಸ್ವಾಗತ, ಸಾಮೂಹಿಕ ಪ್ರಾರ್ಥನೆ ಹಾಗೂ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ಸಂಜೆ ವಾಸ್ತು ಹೋಮ, ವಾಸ್ತು ಬಲಿ ನಡೆಯಿತು.
ಇಂದಿನ ಕಾರ್ಯಕ್ರಮ: ಮಾ.4ರಂದು ಬೆಳಗ್ಗೆ ಶತಚಂಡಿಕಾಯಾಗದ ಪಾರಾಯಣ ಆರಂಭ, ಸಂಜೆ ಮೂಲ ಕ್ಷೇತ್ರದಲ್ಲಿ ವಾಸ್ತು, ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಸಸಿಹಿತ್ಲು ಶ್ರೀರಾಮ ಭಜನಾ ಮಂಡಳಿಯಿಂದ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಸುರತ್ಕಲ್‌ನ ಶ್ರೀನಾಟ್ಯಾಂಜಲಿ ಕಲಾ ಅಕಾಡೆಮಿಯ ಚಂದ್ರಶೇಖರ ನಾವಡ ಮತ್ತು ಶಿಷ್ಯ ವೃಂದದಿಂದ ಮಹಿಷ ಮರ್ದಿನಿ ನೃತ್ಯ ರೂಪಕ ಪ್ರದರ್ಶಿಸಲ್ಪಡಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.