ದಕ್ಷಿಣ ಕನ್ನಡ

ಬಾಲಕಿಯೊಂದಿಗೆ ಪ್ರಯಾಣ: ಯುವಕನ ಮೇಲೆ ತಂಡ ಹಲ್ಲೆ

Published On :

ಸುಳ್ಯ: ಸುಳ್ಯದ ಕಾಲೇಜಿಗೆ ಹೋಗುವ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕನ ಮೇಲೆ ಯುವಕರ ತಂಡ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ಸುಳ್ಯದಲ್ಲಿ ನಡೆದಿದೆ. ಜಯನಗರದ ಅನ್ಯಕೋಮಿನ ಯುವಕನೋರ್ವ ಕಾಲೇಜೊಂದರ ವಿದ್ಯಾರ್ಥಿನಿಯೊಂದಿಗೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕುರುಂಜಿಭಾಗ್‌ನಲ್ಲಿ ಯುವಕರ ತಂಡ ತಡೆದು ನಿಲ್ಲಿಸಿ ಆತನ ಮೊಬೈಲ್ ಪರಿಶೀಲಿಸಿದಾಗ ಅದರಲ್ಲಿ ಯುವತಿಯ ಫೋಟೋ ಹಾಗೂ ಇತರ ಯುವತಿಯರ ಫೋಟೋ ಇತ್ತೆನ್ನಲಾಗಿದೆ. ಈ ಕುರಿತು ವಿಚಾರಿಸಿದಾಗ ಆತ ಸರಿಯಾದ ಮಾಹಿತಿ ನೀಡದೆ ಇದ್ದುದರಿಂದ ಆತನ ಮೇಲೆ ಹಲ್ಲೆ ನಡೆಸಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ಯುವಕನ ತಂದೆಯನ್ನು ಕರೆದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದಾರೆ. ಘಟನೆ ಕುರಿತು ಯಾರೂ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.