ಜಿ.ಪಂ. ಅನುದಾನಕ್ಕೆ ಕೇಂದ್ರ ಕತ್ತರಿ!
ಮಂಗಳೂರು: ರಾಜ್ಯದಲ್ಲಿ ಹಿಂದೆ ಬಿಜೆಪಿ ಆಡಳಿತಕ್ಕೆ ಬಂತೆಂಬ ಕಾರಣಕ್ಕೆ ಜಿಲ್ಲಾ ಪಂಚಾಯ್ತಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಕತ್ತರಿ ಹಾಕಿತೇ?
2008ರಿಂದ ಜಿಲ್ಲಾ ಪಂಚಾಯ್ತಿಗೆ ಕೇಂದ್ರ ಅನುದಾನ ಸರಿಯಾಗಿ ಬರುತ್ತಿಲ್ಲ. ಈ ವಿಚಾರವನ್ನು ಸ್ವತಃ ಜಿಲ್ಲಾ ಪಂಚಾಯ್ತಿ ಆಡಳಿತವೇ ಬಹಿರಂಗಪಡಿಸಿದೆ. ಜಿಲ್ಲಾ ಪಂಚಾಯ್ತಿಗೆ ವಿವಿಧ ಯೋಜನೆಗಳಲ್ಲಿ ಅನುದಾನ ಬಿಡುಗಡೆಯಾಗುತ್ತಿದೆ. ಅದರಲ್ಲಿ ಕೇಂದ್ರ ಯೋಜನೆಯಲ್ಲಿ ಕಳೆದ ಆರು ವರ್ಷದಿಂದ ಸರಿಯಾಗಿ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದ ಜಿಲ್ಲಾ ಪಂಚಾಯ್ತಿ ಅಭಿವೃದ್ಧಿಯಲ್ಲೂ ಒಂದಷ್ಟು ಕುಂಠಿತ ಉಂಟಾಗಿದೆ.
'ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲಾ ಪಂಚಾಯ್ತಿಗೆ ಕೇಂದ್ರ ಅನುದಾನ ಬರುವುದು ಸ್ಥಗಿತಗೊಂಡಿದೆ. ಈ ಬಗ್ಗೆ ಪದೇ ಪದೇ ನೆನಪೋಲೆ ಕಳುಹಿಸಿದರೂ ಪ್ರಯೋಜನವಾಗಿಲ್ಲ. ಯಾವ ಕಾರಣಕ್ಕಾಗಿ ಅನುದಾನ ತಡೆಹಿಡಿಯಲಾಗಿದೆ ಎಂಬುದನ್ನು ಕೇಂದ್ರದ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ರಾಜ್ಯದಿಂದ ಕೇಳಿದ್ದಾರೋ ಗೊತ್ತಿಲ್ಲ. ಬಹುಶಃ ರಾಜ್ಯದಲ್ಲಿ ಬಿಜೆಪಿ ಆಳ್ವಿಕೆ ಇತ್ತೆಂಬ ಕಾರಣಕ್ಕೆ ಅನುದಾನ ಬಿಡುಗಡೆ ಮಾಡದಿರಬಹುದು' ಎಂದು ಆರೋಪಿಸುತ್ತಾರೆ ದ.ಕ.ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೊರಗಪ್ಪ ನಾಯ್ಕ.
ಅಂಗವಿಕಲರ ಶಿಕ್ಷಣಕ್ಕಿಲ್ಲ ಕಾಸು: ಅಂಗವಿಕಲರ ಮಕ್ಕಳಿಗೆ ಸಮಗ್ರ ಶಿಕ್ಷಣಕ್ಕೆ ರು. 7 ಲಕ್ಷ ಗುರಿ ನಿಗದಿಪಡಿಸಿತ್ತು. ಈ ಬಗ್ಗೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿತ್ತು. ಆದರೆ ಕೇಂದ್ರದಿಂದ ಚಿಕ್ಕಾಸೂ ಬಿಡುಗಡೆಯಾಗಿಲ್ಲ. ಪರಿಶಿಷ್ಟ ವರ್ಗಗಳ ವಿದ್ಯಾರ್ಥಿ ವೇತನಕ್ಕೆ ರು. 4 ಲಕ್ಷ ಬಿಡುಗಡೆಗೆ ಕೋರಿತ್ತು, ಅದಕ್ಕೂ ಕೇಂದ್ರ ಹಣ ಕೊಟ್ಟಿಲ್ಲ. ಪುಸ್ತಕ ಭಂಡಾರ, ಅಸ್ಪೃಶ್ಯತಾ ನಿವಾರಣೆಗೆ ರು. 4 ಲಕ್ಷ ಬೇಡಿಕೆ ಇಟ್ಟಿದ್ದು, ಅದು ಕೂಡ ಬಂದಿಲ್ಲ. ಕೃಷಿ ಅಭಿವೃದ್ಧಿಗೆ ರು. 4.80 ಲಕ್ಷ,
ಆತ್ಮಭೂಷಣ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

