ಲೋಕಸಭಾ ಚುನಾವಣೆ; ಬ್ಯಾನರ್, ಫ್ಲೆಕ್ಸ್, ಕಟೌಟ್ ತೆರವಿಗೆ ಸೂಚನೆ
ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಹಾಕಲಾಗಿದ್ದ ಎಲ್ಲ ರೀತಿಯ ಬ್ಯಾನರ್, ಫ್ಲೆಕ್ಸ್, ಕಟೌಟ್ಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಇಲ್ಲವಾದರೆ ಅಧಿಕಾರಿಗಳು ತೆರವುಗೊಳಿಸಬೇಕು ಎಂದು ಪುತ್ತೂರು ಸಹಾಯಕ ಕಮಿಷನರ್ ಎಚ್.ಕೆ. ಕೃಷ್ಣಮೂರ್ತಿ ಸೂಚಿಸಿದ್ದಾರೆ.
ಪುತ್ತೂರು ತಾ.ಪಂ. ಸಭಾಂಗಣದಲ್ಲಿ ನಡೆದ ಅಧಿಕಾರಿಗಳ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಯಾವುದೇ ರಾಜಕೀಯ ಬ್ಯಾನರ್ಗಳನ್ನು ಹಾಕುವಂತಿಲ್ಲ. ಇತರೆ ಧಾರ್ಮಿಕ ಹಾಗೂ ಇನ್ನಿತರ ಕಾರ್ಯಕ್ರಮಗಳ ಬ್ಯಾನರನ್ನು ಕಾರ್ಯಕ್ರಮ ನಡೆಸುವ ಸ್ಥಳದಲ್ಲಿ ಅಳವಡಿಸಬಹುದಾಗಿದೆ. ಉಳಿದಂತೆ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಬ್ಯಾನರ್, ಕಟೌಟ್ ಹಾಕುವಂತಿಲ್ಲ. ಈಗಾಗಲೇ ನಗರದಲ್ಲಿ ಅಳವಡಿಸಲಾದ ಕಟೌಟ್, ಬ್ಯಾನರ್ಳನ್ನು ತರವುಗೊಳಿಸಬೇಕು. ಈ ಕುರಿತು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು. ಅವರು ತೆರವುಗೊಳಿಸದಿದ್ದರೆ ಅಧಿಕಾರಿಗಳು ಶೀಘ್ರವೇ ಅವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಏ.17ರವರೆಗೆ ಕೆಲ ರಾಜಕೀಯೇತರ ಕಾರ್ಯಕ್ರಮಗಳು ನಿಗದಿಯಾಗಿದ್ದು ಅವುಗಳಿಗಾಗಿ ಈಗಾಗಲೇ ಪರವಾನಗಿ ಪಡೆದವರು ಮತ್ತೆ ಕಡ್ಡಾಯವಾಗಿ ಹೊಸ ಪರವಾನಗಿ ಪಡೆಯಬೇಕು. ಪರವಾನಗಿ ಇಲ್ಲದೆ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ ಎಂದರು.
ಇಲಾಖೆಯ ಎಚ್ಚರಿಕೆಯ ಬಳಿಕವೂ ಬ್ಯಾನರ್, ಕಟೌಟ್ ಹಾಗೂ ಫ್ಲೆಕ್ಸ್ಗಳನ್ನು ಕಾನೂನು ಬಾಹಿರವಾಗಿ ಅಳವಡಿಸಿದ್ದಲ್ಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕೈಗೊಳ್ಳುವ ಮೂಲಕ ಕೇಸು ದಾಖಲಿಸಲಾಗುವುದು ಎಂದು ಮನ್ನೆಚ್ಚರಿಕೆ ನೀಡಿದರು. ತಹಸೀಲ್ದಾರ್ ಎಂ.ಟಿ. ಕುಳ್ಳೇಗೌಡ, ಕಂದಾಯ ನಿರೀಕ್ಷ ಕುಂಞಣ್ಣ ರೈ, ತಾ.ಪಂ. ಇಒ ವಿಜಯಗೌಡ ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

