ದಕ್ಷಿಣ ಕನ್ನಡ

ವಿಷಾಹಾರ ಸೇವನೆ: ಮತ್ತೆ 22 ವಿದ್ಯಾರ್ಥಿನಿಯರು ಅಸ್ವಸ್ಥ

Published On :

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಶನಿವಾರ ರಾತ್ರಿ ಆಹಾರ ಸೇವಿಸಿದ 26 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತೆ ಸೋಮವಾರ ಮತ್ತೆ 22ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿದ್ಯಾರ್ಥಿನಿಯರು ಸೇವಿಸಿದ ಆಹಾರವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.  ಸೋಮವಾರ ವಿದ್ಯಾರ್ಥಿನಿಯರಾದ ಶಿಲ್ಪಾ, ಮೈನಾ, ಸೌಮ್ಯ, ರಮ್ಯ, ಅಶ್ವಿತಾ, ರೇಣುಕಾ, ಮೇರಿ, ಕುಸುಮಾ, ಪೂಜಾ, ಕವಿತಾ, ಸವಿತಾ, ಸುಶ್ಮಿತಾ, ಸುಜಿತಾ, ಸುಜಾತ, ಮಾನ್ಯ, ತೇಜಸ್ವಿನಿ, ಪೂರ್ಣಿಮಾ, ಶಿಲ್ಪಾ, ಮಾಲತಿ, ಸವಿತಾ, ಮೀನಾಕ್ಷಿ, ಅಕ್ಷತಾ ಮೊದಲಾದವರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಜಿರೆ, ಮುಂಡಾಜೆ, ನಾರಾವಿ, ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವೈದ್ಯರನ್ನು, ಶುಶ್ರೂಕಿ, ಲ್ಯಾಬ್ ಟೆಕ್ನಿಶಿಯರನ್ನು ಹೆಚ್ಚುವರಿಯಾಗಿ ನಿಯೋಜಿಲಾಗಿದೆ.
ವೆನ್ಲಾಕ್ ಹಾಗೂ ಕೆಎಂಸಿ ಆಸ್ಪತ್ರೆಯ ತಜ್ಞ ವೈದರ ತಂಡ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ.
ಜಿ.ಪಂ. ಅಧ್ಯಕ್ಷ ಕೊರಗಪ್ಪ ನಾಯ್ಕ್ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ತಕ್ಷಣ ಚಿಕಿತ್ಸೆ ನೀಡುವಂತೆ ಸೂಚಿಸಿದ್ದರು. ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ವಿದ್ಯಾರ್ಥಿನಿಯರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ನಂತರ ಹಾಸ್ಟೆಲ್‌ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಶಾಸಕ ಕೆ.ವಸಂತ ಬಂಗೇರ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಯೋಗ ಕ್ಷೇಮ ವಿಚಾರಿಸಿದರು. ಪೋಷಕರನ್ನು ಸಂತೈಸಿದರು. ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ತನಿಖೆ ನಡೆಸುವಂತೆ ಸೂಚಿಸಿದರು. ಪುತ್ತೂರು ಉಪ ವಿಭಾಗಾಧಿಕಾರಿ ಕೃಷ್ಣಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಈ ಸಂದರ್ಭ ತಹಸೀಲ್ದಾರ್ ಶ್ರೀನಿವಾಸ್ ಇದ್ದರು.  ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ತಾ.ಪಂ. ಅಧ್ಯಕ್ಷ ಕೇಶವ ಎಂ., ಜಿ.ಪಂ. ಸದಸ್ಯೆ ಸಿ.ಕೆ. ಚಂದ್ರಕಲಾ ಭೇಟಿ ನೀಡಿದರು.
ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ ರಾವ್, ತಾಲೂಕು ವೈದ್ಯಾಧಿಕಾರಿ ಕಲಾಮಧು, ಆರೋಗ್ಯಾಧಿಕಾರಿ ಆದಂ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಂತೋಷ್ ಕುಮಾರ್, ತಾಲೂಕು ಅಧಿಕಾರಿ ಮೋಹನ್ ಆಸ್ಪತ್ರೆಯಲ್ಲಿ ಇದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.