ದಕ್ಷಿಣ ಕನ್ನಡ

ನದಿಯಲ್ಲಿ ಶವ ಪತ್ತೆ

Published On :

ಹಿರಿಯಡ್ಕ: ಅಂಜಾರು ಗ್ರಾಮದ ಪಡುಅಂಜಾರು ಪಾಲುಬೆಟ್ಟು ಬಂದಕಡಿ ಎಂಬಲ್ಲಿನ ಸ್ವರ್ಣಾ ನದಿಯ ತಟದಲ್ಲಿ ಅಪರಿಚಿತ ಕೊಳೆತ ಮೃತದೇಹವು ಮಂಗಳವಾರ ಕಂಡು ಬಂದಿದೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಗುಪ್ಸೆ; ನೇಣಿಗೆ ಶರಣು
ಕೋಟ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಹಡು ಗ್ರಾಮದ ಯಡಬೆಟ್ಟು ಎಂಬಲ್ಲಿ ಮಂಗಳವಾರ ನಡೆದಿದೆ. ವಿಠಲ ದೇವಾಡಿಗ (30) ಮೃತರು. ಇವರು ವಿಪರೀತ ಕುಡಿತದ ಚಟ ಹೊಂದಿದ್ದು, ಇದರಿಂದ ಹಣದ ಸಮಸ್ಯೆ ಉಂಟಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಸಹೋದರ ಕುಮಾರ ದೇವಾಡಿಗ ನೀಡಿದ ದೂರಿನಂತೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವ್ಯಕ್ತಿ ಆತ್ಮಹತ್ಯೆ
ಪಡುಬಿದ್ರಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿಯ ಇನ್ನಾ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಡೆಂಜಿಲ್ ಡಿಸೋಜಾ(24) ಮೃತರು. ಇವರು ತಾವು ಪ್ರೀತಿಸಿದ ಹುಡುಗಿಯ ಮನೆಯವರು ಹುಡುಗಿಯನ್ನು 2 ವರ್ಷದವರೆಗೆ ಮದುವೆ ಮಾಡಿ ಕೊಡುವುದಿಲ್ಲವೆಂದು ಹೇಳಿದ ಕಾರಣಕ್ಕೆ ಮನನೊಂದು ತಮ್ಮ ಮನೆಯ ಕೊಟ್ಟಿಗೆಯ ಜಂತಿಯಲ್ಲಿರುವ ಕಬ್ಬಿಣದ ರಾಡ್‌ಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ತಂದೆ ಸಿರಿಲ್ ಡಿಸೋಜ ನೀಡಿದ ದೂರಿನಂತೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಟ್ಕಾ ಜುಗಾರಿ; ಒಬ್ಬನ ಸೆರೆ
ಕೋಟ: ಚಿತ್ರಪಾಡಿ ಗ್ರಾಮದ ಸಾಲಿಗ್ರಾಮ ಮೀನು ಮಾರುಕಟ್ಟೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವನ್ನಾಗಿರಿಸಿ ಮಟ್ಕಾ- ಜುಗಾರಿ ಆಟ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ. ಆರೋಪಿ ಸುನೀಲ್ ತನ್ನ ಸ್ವಂತ ಲಾಭಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ-ಜುಗಾರಿ ಆಟ ನಡೆಸುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೋಟ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 850 ನಗದು ಹಾಗೂ ಇತರೆ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.