ದಕ್ಷಿಣ ಕನ್ನಡ

'ಕೆಲಸ ಮಾಡದ ಅಧಿಕಾರಿಗಳು ಮಾತೃ ಇಲಾಖೆಗೆ ಮರಳಲಿ'

Published On :

ಮಂಗಳೂರು: ಸಮಸ್ಯೆ ಹೇಳಿಕೊಂಡು ಬರುವ ಜನರ ಕೆಲಸ ಮಾಡಲು ಆಗದಿದ್ದರೆ, ಪಾಲಿಕೆಯ ನಿರ್ಣಯಗಳನ್ನು ಅನುಷ್ಠಾನಕ್ಕೆ ತಾರಲು ಕಷ್ಟವಾಗುವ ಅಧಿಕಾರಿಗಳು ಮಾತೃ ಇಲಾಖೆಗೆ ಮರಳಬಹುದು ಎಂದು ಮೇಯರ್ ಮಹಾಬಲ ಮಾರ್ಲ ಹೇಳಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಮೇಯರ್ ಚುನಾವಣೆ ಬಳಿಕ ಮೊದಲ ಸಭೆಯಲ್ಲಿ ಮಾತನಾಡಿದರು. ನಾವು ಜನಾದೇಶದಿಂದ ಆಯ್ಕಯಾದವರು. ನಮ್ಮ ಮಾತುಗಳನ್ನು ದಾಖಲಿಸುವವರು, ಕೇಳುವವರು, ಅನುಷ್ಠಾನ ಮಾಡುವವರು ಅಧಿಕಾರಿಗಳು. ಸರಿಯಾಗಿ ಸ್ಪಂದಿಸದೇ ಇರುವುದು ದುರ್ದೈವ. ಅಂಥ ಅಧಿಕಾರಿಗಳು ತಮ್ಮ ಮಾತೃ ಇಲಾಖೆಗೆ ಹೋಗಬಹುದು ಎಂದರು.
ಮಹಾ ನಗರಪಾಲಿಕೆಯಲ್ಲಿ ಒಂದು ವರ್ಷ ಜನಪ್ರತಿನಿಧಿಗಳ ಆಡಳಿತ ಇಲ್ಲದಿರುವಾಗ ಜಿಲ್ಲಾಧಿಕಾರಿ ಕೆಲವೊಂದು ನಿರ್ಣಯ ಕೈಗೊಂಡಿದ್ದಾರೆ. ಪಾಲಿಕೆ ನಾಗರಿಕರಿಗೆ ಅನುಕೂಲವಾಗುವ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತೇವೆ.
ಅಧಿಕಾರಿಗಳು ಸರಿಯಾಗಿ ಸ್ಪಂದಿಸಬೇಕು ಎಂದು ಮನವಿ ಮಾಡಿದರು.
ಪ್ರತಿ ಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ ಮಾತನಾಡಿ, ಚುನಾವಣೆ ಸಂದರ್ಭ ತೆರಿಗೆ ಹೆಚ್ಚಿಸುವುದಿಲ್ಲ ಎಂಬ ಭರವಸೆ ನೀಡಿ ಪಾಲಿಕೆ ಆಡಳಿತಾಧಿಕಾರಿಗಳು ಶೇ.15 ತೆರಿಗೆ ಹೆಚ್ಚಳ ಮಾಡಿದ್ದಾರೆ. ಜನರಿಗೆ ಕೊಟ್ಟ ಭರವಸೆ ಉಳಿಸಿಕೊಳ್ಳಬೇಕು, 5 ವರ್ಷವೂ ತೆರಿಗೆ ಹೆಚ್ಚಿಸಬಾರದು ಎಂದು ಮನವಿ ಮಾಡಿದರು.
ಆಡಳಿತ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಮಾರ್ಲರ ಸಮಾಜ ಸೇವೆ, ಕಾರ್ಯವೈಖರಿಯನ್ನು ಕೊಂಡಾಡಿದರು.
ಕಾರ್ಪೊರೇಟರ್ ವಿಜಯಕುಮಾರ್ ಶೆಟ್ಟಿ ತುಳುವಿನಲ್ಲಿ ಮಾತನಾಡಿ, ಪಾಲಿಕೆ ಸಾಮಾನ್ಯ ಸಭೆಯನ್ನು ವರ್ಷಕ್ಕೆ ಒಮ್ಮೆಯಾದರೂ ತುಳು ಭಾಷೆಯಲ್ಲಿಯೇ ಮಾಡಬೇಕು. ಈ ಮೂಲಕ ಈ ಮಣ್ಣಿನ ತುಳು ಭಾಷೆ, ಸಂಸ್ಕೃತಿಗೆ ಮನ್ನಣೆ ನೀಡಬೇಕು ಎಂದು ಮನವಿ ಮಾಡಿದರು. ಸಿಪಿಎಂ ಕಾರ್ಪೊರೇಟರ್ ತುಳುವಿನಲ್ಲಿಯೇ ಮಾತನಾಡಿದರು. ತಿಲಕ್ ರಾಜ್, ಅಝೀಝ್ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.