ಅಪರಿಚಿತ ಭಿಕ್ಷುಕ ಸಾವು
ಮೂಲ್ಕಿ: ಮೂಲ್ಕಿ ಠಾಣಾ ವ್ಯಾಪ್ತಿಯ ಎಸ್. ಕೋಡಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಬುಧವಾರ ರಾತ್ರಿ ಕಂಡುಬಂದಿದೆ. ಎಸ್. ಕೋಡಿ, ಪುನರೂರು, ಪಕ್ಷಿಕೆರೆ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿ ಭಿಕ್ಷೆ ಬೇಡುತ್ತಿದ್ದರು. ಬಳಿಕ ಎಸ್. ಕೋಡಿಯ ಬಸ್ ನಿಲ್ದಾಣದಲ್ಲಿ ರಾತ್ರಿ ಅವಧಿಯಲ್ಲಿ ಮಲಗುತ್ತಿದ್ದರು.
ರಾತ್ರಿ ವೇಳೆ ಪರಿಸರದವರು ಊಟ ನೀಡುತ್ತಿದ್ದು, ಅದರಂತೆ ಬುಧವಾರ ರಾತ್ರಿ ಅವಧಿಯಲ್ಲಿ ಊಟ ನೀಡಲು ಹೋದ ಸಂದರ್ಭ ಮಲಗಿದ್ದ ಸ್ಥಿತಿಯಲ್ಲಿದ್ದುದನ್ನು ಕಂಡ ಸ್ಥಳೀಯರು ಮೂಲ್ಕಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪೊಲೀಸರು ಪರಿಶೀಲಿಸಿದಾಗ ಅಪರಿಚಿತ ವ್ಯಕ್ತಿ ಮೃತಪಟ್ಟಿರುವುದು ಕಂಡುಬಂದಿದೆ. ಶವವನ್ನು ಮೂಲ್ಕಿ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಸಂಬಂಧಿಕರಿದ್ದಲ್ಲಿ ಮೂಲ್ಕಿ ಪೊಲೀಸ್ ಠಾಣೆ, ದೂರವಾಣಿ ಸಂಖ್ಯೆ- 0824- 2290533 ಸಂಪರ್ಕಿಸುವಂತೆ ಠಾಣಾಧಿಕಾರಿ ತಿಳಿಸಿದ್ದಾರೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರದಿಂದ ಬಿದ್ದು ಸಾವು
ಸುಳ್ಯ: ಕೊಯನಾಡು ನಿವಾಸಿ ಸಿ.ಕೆ. ಹೊನ್ನಪ್ಪ ನೈಕ್(36) ಮರದಿಂದ ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮನೆಗೆ ಅಪಾಯ ಸ್ಥಿತಿಯಲ್ಲಿದ್ದ ಮರದ ಕೊಂಬೆಗಳನ್ನು ಕಡಿಯುತ್ತಿರುವ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದರು. ಸೊಂಟ ಹಾಗೂ ಕುತ್ತಿಗೆ ಮೂಳೆ ಮುರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

