ದಕ್ಷಿಣ ಕನ್ನಡ

ಶಿಮಂತೂರು: ರಸ್ತೆ ಅತಿಕ್ರಮಣ- ದೂರು

Published On :

ಮೂಲ್ಕಿ: ಕಿಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಮಂತೂರು ಸಮೀಪ ಸ್ಥಳೀಯರೊಬ್ಬರು ರಸ್ತೆ ಅತಿಕ್ರಮಿಸಿಕೊಂಡಿದ್ದಾರೆ ಎಂದು ನಾಗರಿಕರು ದೂರಿದ್ದಾರೆ.
ಕಿಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಮಂತೂರು ದೇವಳದ ಬಳಿಯಿಂದ ಅಂಗರಗುಡ್ಡೆಯಿಂದ ಎಳತ್ತೂರು ವರೆಗೆ 6.5 ಕಿ.ಮೀ. ಮಣ್ಣಿನ ರಸ್ತೆ ನಿರ್ಮಾಣವಾಗಿದ್ದು, ಹತ್ತು ವರ್ಷಗಳ ಹಿಂದೆ ನಿರ್ಮಾಣವಾದ ಮಣ್ಣಿನ ರಸ್ತೆಯನ್ನು ಇತ್ತೀಚೆಗೆ ಅಗಲಗೊಳಿಸಲಾಗಿತ್ತು.
ರಸ್ತೆಗೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಡಾಂಬರೀಕರಣಕ್ಕೆ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ರಸ್ತೆ ನಿರ್ಮಾಣವಾಗುವ ಉದ್ದೇಶದಿಂದ ಸ್ಥಳೀಯರು ರಸ್ತೆ ನಿರ್ಮಾಣಕ್ಕೆ ತಮ್ಮ ಜಾಗ ಬಿಟ್ಟು ಕೊಟ್ಟಿದ್ದಾರೆ. ಅದರಂತೆ ಶಿಮಂತೂರು ದೇವಳದ ಸಮೀಪದ ನಿವಾಸಿ ಮಹಿಳೆಯೊಬ್ಬರು ಕೂಡ ಜಾಗ ಬಿಟ್ಟುಕೊಟ್ಟಿದ್ದರಿಂದ ಮಣ್ಣಿನ ರಸ್ತೆಯು ನಿರ್ಮಾಣವಾಗಿದೆ. ಆದರೆ, ಏಕಾಏಕಿ ಮಹಿಳೆ ರಸ್ತೆಗೆ ಕಬ್ಬಿಣದ ತಂತಿ ಹಾಕುವ ಮೂಲಕ ರಸ್ತೆಯನ್ನು ಅತಿಕ್ರಮಿಸಿದ್ದಾರೆ ಎಂದು ಸ್ಥಳೀಯರು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಮೂಲ್ಕಿ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಸ್ಥಳಕ್ಕೆ ಆಗಮಿಸಿದ ಮೂಲ್ಕಿ ಪೊಲೀಸರು ಮಹಿಳೆಯೊಂದಿಗೆ ಮಾತುಕತೆ ನಡೆಸಿ ತಡೆ ಬೇಲಿ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಹಿಂದೆ ರಸ್ತೆ ನಿರ್ಮಾಣಕ್ಕೆ ಶಿಮಂತೂರು ದೇವಳಕ್ಕೆ ಜಾಗ ನೀಡಿದ್ದು, ಅದಕ್ಕೆ ಪರಿಹಾರ ಸಿಕ್ಕಿಲ್ಲ. ಇದೀಗ ಈ ರಸ್ತೆಗೆ ಕೂಡ ಜಾಗ ನೀಡಿದ್ದರಿಂದ ತನಗೆ ತೊಂದರೆಯಾಗಿದೆ ಎಂದು ಮಹಿಳೆ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.