ಗುಡ್ಡಕ್ಕೆ ಆಕಸ್ಮಿಕ ಬೆಂಕಿ; ಗೇರು, ಅಕೇಶಿಯಾ ಮರಗಳು ಭಸ್ಮ
ವಿಟ್ಲ: ವಿಟ್ಲ ಸಮೀಪದ ಅನಿಲಕಟ್ಟೆ ಶಾಲೆಯ ಬಳಿಯ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 7 ಎಕರೆ ಜಾಗ, ಗೇರು ಮತ್ತು ಅಕೇಶಿಯಾ ಹಾಗೂ ಇತರ ಮರಗಳು ಭಸ್ಮಗೊಂಡ ಘಟನೆ ಭಾನುವಾರ ಸಂಭವಿಸಿದೆ.
ಅನಿಲಕಟ್ಟೆ ತಿಮ್ಮಪ್ಪ ಗೌಡ ದೇವರಮನೆ, ಲಕ್ಷ್ಮಣ ಗೌಡ ದೇವರಮನೆ, ರಾಮಣ್ಣ ಗೌಡ ಸೊರಂಗದ ಮೂಲೆ, ಐತ್ತಪ್ತ ಗೌಡ ಬನ ಮತ್ತು ಲಾರೆನ್ಸ್ ಲೆಸ್ರಾದೊ ಎಂಬವರಿಗೆ ಸೇರಿದ ಗುಡ್ಡೆ ಸಂಪೂರ್ಣವಾಗಿ ನಾಶವಾಗಿದೆ ಎಂದು ತಿಳಿದು ಬಂದಿದೆ.
ಈ ಪ್ರದೇಶದಲ್ಲಿ ಹಳೆಯ ಕಾಲದ ವಿದ್ಯುತ್ ಪರಿವರ್ತಕವಿದೆ. ಅಲ್ಲದೆ ಕೆಳಮಟ್ಟದಲ್ಲಿ ಹಾದು ಹೋಗುವ ಲೈನ್ನಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು ಪುತ್ತೂರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಅವರು ಸ್ಥಳಕ್ಕೆ ಬರುವಷ್ಟರಲ್ಲಿ ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ಸಂಭವಿಸಿದಂತೆ ಎಚ್ಚರವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

