ದಕ್ಷಿಣ ಕನ್ನಡ

ಅಂ.ರಾ. ಒಲಿಂಪಿಯಾಡ್‌ಗೆ ಸುಮಿತ್

Published On :

ಮಂಗಳೂರು: ಕುಂಟಿಕಾನ ಸೆಂಟರ್ ಫಾರ್ ಅಡ್ವಾನ್ಸ್‌ಡ್ ಲರ್ನಿಂಗ್(ಸಿಎಫ್‌ಎಎಲ್)ಯಲ್ಲಿ ತರಬೇತಿ ಪಡೆದ ಶಾರದಾ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಸುಮಿತ್ ಅಂತಾರಾಷ್ಟ್ರೀಯ ಒಲಿಂಪಿಯಾಡ್ ಪರೀಕ್ಷೆಯಲ್ಲಿ 3ನೇ ಹಂತಕ್ಕೆ ಆಯ್ಕೆಯಾಗಿದ್ದಾರೆ.
ದ.ಕ. ಮತ್ತು ಉಡುಪಿ ಜಿಲ್ಲೆಗಳಿಂದ ಪ್ರಥಮ ಬಾರಿಗೆ ಸುಮಿತ್ ಅವರು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಲ್ಲಿ ಆಯ್ಕೆಯಾಗಿದ್ದಾರೆ ಎಂದು ಸಿಎಫ್‌ಎಎಲ್ ಪ್ರಾಂಶುಪಾಲೆ ಸೆವರಿನ್ ರೊಸಾರಿಯೋ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮುಂಬೈನ ಹೋಮಿಬಾಬ ವಿಜ್ಞಾನ ಮತ್ತು ಸಂಶೋಧನ ಕೇಂದ್ರದಲ್ಲಿ ಏ. 10 ರಿಂದ 21ರವರೆಗೆ ನಡೆಯುವ ಭೌತಶಾಸ್ತ್ರ ಶಿಬಿರ ಮತ್ತು ಮೇ 27 ರಿಂದ ಜೂ. 6ರವರೆಗೆ ನಡೆಯುವ ರಸಾಯನ ಶಾಸ್ತ್ರ ಶಿಬಿರಗಳಲ್ಲಿ ಪಾಲ್ಗೊಳ್ಳುವರು.
 ಮೂರನೇ ಹಂತದ ಶಿಬಿರದಲ್ಲಿ ನಡೆಸುವ ಪರೀಕ್ಷೆ, ಚರ್ಚಾಕೂಟ ಮತ್ತು ಪ್ರಯೋಗಗಳಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸುವ ಪ್ರಾವೀಣ್ಯತೆ ಆಧಾರದಲ್ಲಿ ಪ್ರಥಮ 6 ವಿದ್ಯಾರ್ಥಿಗಳನ್ನು ಅಂತಾರಾಷ್ಟ್ರೀಯ ಒಲಿಂಪಿಯಾಡ್ ಆಯ್ಕೆ ಮಾಡಲಾಗುತ್ತದೆ ಎಂದರು.
 ನಾಲ್ಕನೇ ಹಂತದಲ್ಲಿ ನಡೆಸಲಾಗುವ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಪ್ರಯೋಗ ಶಾಲೆಗಳಲ್ಲಿ ತರಬೇತಿ ನೀಡಲಾಗುತ್ತದೆ. ಅಂತಿಮ ಹತಂಕ್ಕೆ ಆಯ್ಕೆಯಾದ 6 ವಿದ್ಯಾರ್ಥಿ ಹಾಗೂ ಶಿಕ್ಷಕರ ಅಂತಾರಾಷ್ಟ್ರೀಯ ಒಲಿಂಪಿಯಾಡ್‌ನಲ್ಲಿ ಭಾಗವಹಿಸುವರು ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ವಿದ್ಯಾರ್ಥಿ ಸುಮಿತ್, ತಾಯಿ ಅರುಣಾ, ಉಪಪ್ರಾಂಶುಪಾಲ ಆರ್ಥರ್ ಪಾಯಸ್, ಸಂಯೋಜಕ ಹೆನ್ರಿ ರೊಸಾರಿಯೋ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.