ಕಾಂಗ್ರೆಸ್, ಜೆಡಿಎಸ್ ನಾಯಕರಿಗೇ ಮೋದಿ ಮೋಡಿ: ಸುರೇಶ್ ಕುಮಾರ್
ಬಂಟ್ವಾಳ: ಬಿಜೆಪಿ ಸಿದ್ಧಾಂತ ಒಪ್ಪದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಹಲವು ನಾಯಕರೇ ಬಿಜೆಪಿ ಪ್ರಧಾನ ಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿಯ ಆಕರ್ಷಣೆಗೆ ಒಳಗಾಗಿದ್ದಾರೆ. ಮೋದಿ ಪ್ರಧಾನಿಯಾಗಲಿ ಎಂಬ ಆಶಯವನ್ನಿರಿಸಿಕೊಂಡಿದ್ದಾರೆ ಎಂದು ಬಿಜೆಪಿ ವಕ್ತಾರ, ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ. ರೋಡ್‌ನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಮಂಗಳವಾರ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ನಂಬಿದರೆ ದೇಶಕ್ಕೇ ಕ್ಯಾನ್ಸರ್: ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡ ಮಾಜಿ ಸಂಸದೆ ತೇಜಸ್ವಿನಿ ರಮೇಶ್ ಮಾತನಾಡಿ, ಅಡಕೆ ತಿಂದರೆ ಕ್ಯಾನ್ಸರ್ ಬರುತ್ತದೆ ಎಂದು ನ್ಯಾಯಾಲಯಕ್ಕೆ ಅಫಿದವಿತ್ ಸಲ್ಲಿಸಿ ರೈತರನ್ನು ಅವಮಾನಿಸಿದ ಕಾಂಗ್ರೆಸ್ ನಂಬಿದರೆ ಭವಿಷ್ಯದಲ್ಲಿ ದೇಶಕ್ಕೇ ಕ್ಯಾನ್ಸರ್ ತಗಲಿದರೂ ಅಚ್ಚರಿಯಿಲ್ಲ ಎಂದು ಲೇವಡಿ ಮಾಡಿದರು.
ಸಚಿವರಿಂದಲೇ ಅಡ್ಡಗಾಲು- ನಳಿನ್: ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಮಾತನಾಡಿ, ತನ್ನ ಅವಧಿಯಲ್ಲಿ ಕೇಂದ್ರದಿಂದ ಎಷ್ಟು ಅನುದಾನ ತಂದಿದ್ದೀರಿ ಎಂದು ಪ್ರಶ್ನಿಸಿರುವ ಜಿಲ್ಲೆಯ ಉಸ್ತುವಾರಿ ಸಚಿವರೇ ಅನೇಕ ಯೋಜನೆಗಳ ಪ್ರಸ್ತಾವನೆಗಳಿಗೆ ಅಡ್ಡಗಾಲು ಹಾಕಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಯೋಗಿಶ್ ಭಟ್, ಕುಂಬ್ಳೆ ಸುಂದರ್ ರಾವ್, ಪದ್ಮನಾಭ ಕೊಟ್ಟಾರಿ, ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ ಭಟ್, ಪಕ್ಷದ ಪ್ರಮುಖರಾದ ರಾಜೇಶ್ ನಾಯ್ಕ್, ತುಂಗಪ್ಪ ಬಂಗೇರ, ನೇಮಿರಾಜ ರೈ, ದೇವದಾಸ ಶೆಟ್ಟಿ, ಪುಷ್ಪಲತಾ ಗಟ್ಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

