ಅಭ್ಯರ್ಥಿಗಳ ಅಫಿದವಿತ್ ವೆಬ್‌ನಲ್ಲಿ ನೋಡಬಹುದು
ಮಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿದವಿತ್‌ನ್ನು ಮುಖ್ಯ ಚುನಾವಣಾಧಿಕಾರಿ ಬೆಂಗಳೂರು ಇವರ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ವೆಬ್‌ಸೈಟ್-
್ಛಜ್ಟ್ಞಛ್ಠಟಿಛಡಿಛ್ಞಛ.್ಞಛ್ಠ.ಟ್ಝ್ಛಿ.್ಝಟಿನಲ್ಲಿ ಲೋಕಸಭೆ ಅಭ್ಯರ್ಥಿಗಳ ನಾಮಪತ್ರ ಸ್ವೀಕಾರ ವಿಭಾಗಕ್ಕೆ ಕ್ಲಿಕ್ ಮಾಡಬೇಕು ಅಥವಾ ದ.ಕ.ಜಿಲ್ಲಾಧಿಕಾರಿ ವೆಬ್‌ಸೈಟ್-ಜ್ಞ.ಟ್ಝ್ಛಿ.್ಝಟಿ ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ಕಾಂಗ್ರೆಸ್ ಅಭ್ಯರ್ಥಿ
ವಿರುದ್ಧ ದೂರು
ಮಂಗಳೂರು: ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜನಾರ್ದನ ಪೂಜಾರಿ ವಿರುದ್ಧ ಬಿಜೆಪಿ ಚುನಾವಣಾಧಿಕಾರಿಗೆ ಎರಡು ಪ್ರತ್ಯೇಕ ದೂರು ನೀಡಿದೆ. ಮಹಾನಗರ ಪಾಲಿಕೆಯ ಸ್ವಯಂಘೋಷಿತ ಆಸ್ತಿ ತೆರಿಗೆ ಮತ್ತು ಘನತ್ಯಾಜ್ಯ ವಿಲೇವಾರಿಯಲ್ಲಿ ಹೆಚ್ಚಳವಾದ ತೆರಿಗೆ ಮೊತ್ತವನ್ನು ಪಾವತಿಸಬಾರದು ಎಂದು ನಗರದಲ್ಲಿ ಚುನಾವಣೆ ಪ್ರಚಾರ ವೇಳೆ ಪೂಜಾರಿ ಹೇಳಿದ್ದಾರೆ. ಇದು ಜನತೆಗೆ ಒಡ್ಡಿದ ಆಮಿಷ. ಮಾ.18ರಂದು ಮಾಧ್ಯಮದಲ್ಲಿ ಪ್ರಕಟವಾದ ಹಾಗೂ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾದ ವರದಿಯಾಧಾರದಲ್ಲಿ ದೂರು ನೀಡಲಾಗಿದೆ ಎಂದು ವಕೀಲ ಕೆ.ಶಂಭು ಶರ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ವಿರುದ್ಧ ಬಿಜೆಪಿ ವಿರೋಧಿಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳು ವಾಟ್ಸ್‌ಆ್ಯಪ್‌ನಲ್ಲಿ ಅವಹೇಳನಕಾರಿಯಾಗಿ ಅಪಪ್ರಚಾರ ಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಗುರುವಾರ ಚುನಾವಣಾಧಿಕಾರಿಗೆ ದೂರು ನೀಡಿದೆ ಎಂದು ಕಾರ್ಯಾಲಯ ಕಾರ್ಯದರ್ಶಿ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

