ಇಂದು ಡೌನ್ಸಿಂಡ್ರೋಂ ವ್ಯಕ್ತಿಗಳ ಸಮಾವೇಶ
ಪುತ್ತೂರು: ವಿಶ್ವ ಡೌನ್ ಸಿಂಡ್ರೋಂ ದಿನಾಚರಣೆ ಅಂಗವಾಗಿ ಡೌನ್ ಸಿಂಡ್ರೋಂ ವ್ಯಕ್ತಿಗಳ ಸಮಾವೇಶ ಶುಕ್ರವಾರ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ಪುತ್ತೂರು ರೋಟರಿ ಸೇವಾ ಸಂಸ್ಥೆ ಅಧ್ಯಕ್ಷ ಹಾಗೂ ಕಾರ್ಯಕ್ರಮದ ಸಂಚಾಲಕ ಡಾ. ಗಣೇಶ್ ಪ್ರಸಾದ್ ಮುದ್ರಾಜೆ ತಿಳಿಸಿದ್ದಾರೆ.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರಿನ ರೋಟರಿ, ಜೇಸಿ, ಲಯನ್ಸ್, ಲಯನೆಸ್, ಸಾಂಸ್ಕೃತಿಕ ಕಲಾಕೇಂದ್ರ ಬೊಳುವಾರು, ಅಸಹಾಯಕರ ಸೇವಾ ಟ್ರಸ್ಟ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಣ ಸಂಪನ್ಮೂಲ ಕೇಂದ್ರ, ಸಂತ ಫಿಲೋಮಿನಾ ಕಾಲೇಜು ಸ್ನಾತಕೋತ್ತರ ವಿಭಾಗ, ಭಾವನಾ ಕಲಾ ಆರ್ಟ್ಸ್ ಬೊಳುವಾರು ಮತ್ತು ಪರಿವರ್ತನಾ ಸೇವಾ ಟ್ರಸ್ಟ್ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸಮಾವೇಶವನ್ನು ವಿಶ್ವ ಅಂಗವಿಕಲ ರಾಜ್ಯ ಪ್ರಶಸ್ತಿ ಪುರಸ್ಕೃತ ಡೌನ್ಸಿಂಡ್ರೋಂ ಪುತ್ತೂರು ಸುರೇಶ್ ನಾಯಕ್ ಮತ್ತು ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ ಉದ್ಘಾಟಿಸಲಿದ್ದಾರೆ. ಡೌನ್ ಸಿಂಡ್ರೋಂ ಚರಣ್ರಾಜ್ ಸಬಳೂರು ಮತ್ತು ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಣಾಧಿಕಾರಿ ಸಿ.ಯು. ಪೂವಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಡೌನ್ ಸಿಂಡ್ರೋಂ ವಿಕಾಸ ಶರ್ಮ ಬಾಳಿಲ ಮತ್ತು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜೇಸಿ ಸೇವಾ ಸಂಸ್ಥೆ ಅಧ್ಯಕ್ಷ ಮುಳಿಯ ಕೃಷ್ಣ ನಾರಾಯಣ, ಲಯನ್ಸ್ ಸೇವಾ ಸಂಸ್ಥೆಯ ಅಧ್ಯಕ್ಷ ಎಂ.ಜಿ. ರಝಾಕ್, ಉಮೇಶ್ ನಾಯಕ್ ಮತ್ತು ಸುರೇಶ್ ನಾಯಕ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

