ಮಾಧ್ಯಮ ಜಾಹೀರಾತು ಮೇಲೆ ನಿಗಾ ವಹಿಸಲು ಕಣ್ಗಾವಲು ಸಮಿತಿ ರಚನೆ
ಮಂಗಳೂರು: ಲೋಕಸಭೆ ಚುನಾವಣೆ ಪ್ರಯುಕ್ತ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2004ರ ಸುಪ್ರೀಂ ಕೋರ್ಟಿನ ತೀರ್ಪಿನ ಅನ್ವಯ ಸಮಿತಿ ಅಸ್ತಿತ್ವಕ್ಕೆ ತರಲಾಗಿದೆ. ಮುದ್ರಣ, ಶ್ರಾವ್ಯ, ದೃಶ್ಯ ಹಾಗೂ ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾಗುವ ರಾಜಕೀಯ ವಿಚಾರಗಳ ಬಗ್ಗೆ ಸಮಿತಿ ನಿಗಾ ವಹಿಸಿ ಕ್ರಮ ಕೈಗೊಳ್ಳಲಿದೆ ಎಂದರು.
ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಮಿತಿ ಕಾರ್ಯ ನಿರ್ವಹಿಸಲಿದೆ. ಮಾಧ್ಯಮದಲ್ಲಿ ಪ್ರಕಟವಾಗುವ ಜಾಹೀರಾತು ಹಾಗೂ ಪೇಯ್ಡ್ ನ್ಯೂಸ್ನ ಬಗ್ಗೆ ಸಮಿತಿ ನಿರಂತರ ನಿಗಾ ವಹಿಸಲಿದೆ. ಜಾಹೀರಾತು ಪ್ರಕಟವಾಗುವ ಮುನ್ನ ಸಮಿತಿಯಿಂದ ಪ್ರಮಾಣೀಕರಣ ಪಡೆಯುವುದು ಅಗತ್ಯವಾಗಿದೆ ಎಂದರು.
ಆಕ್ಷೇಪಾರ್ಹ ವಿಚಾರಗಳ ಬಗ್ಗೆ ತಿಳಿದುಬಂದಲ್ಲಿ ಕೂಡಲೇ ಸಮಿತಿಯು ಸಂಬಂಧಪಟ್ಟವರಿಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಕೂಡ ಕಲ್ಪಿಸಲಾಗಿದೆ. ಎಲ್ಲ ಪ್ರಕ್ರಿಯೆ ಒಂದು ವಾರದೊಳಗೆ ಪೂರ್ಣಗೊಳಿಸಲಾಗುವುದು ಎಂದರು.
7 ದೂರು ದಾಖಲು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 5 ಹಾಗೂ ಪ್ರಚಾರ ಮಾಧ್ಯಮಕ್ಕೆ ಸಂಬಂಧಿಸಿ ಸಮಿತಿಗೆ 2 ದೂರುಗಳು ಬಂದಿದ್ದು, ತನಿಖಾ ಹಂತದಲ್ಲಿದೆ ಎಂದರು.
ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಮಾತನಾಡಿ, ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ರಾಜಕೀಯ ವಿಷಯಗಳನ್ನು ಸಮಿತಿಯು ಹಗಲು ವೇಳೆ ನಿರಂತರ ವೀಕ್ಷಿಸಿ ಅಗತ್ಯವಿದ್ದಲ್ಲಿ ರೆಕಾರ್ಡ್ ಮಾಡಲಿದೆ ಹಾಗೂ ರಾತ್ರಿ 10 ಗಂಟೆ ಬಳಿಕ ಪ್ರಸಾರವಾಗುವ ಎಲ್ಲ ಕಾರ್ಯಕ್ರಮಗಳನ್ನು ರೆಕಾರ್ಡ್ ಮಾಡಲಾಗುವುದು ಎಂದರು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಎಂಸಿಎಂಸಿ ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ವಾರ್ತಾಧಿಕಾರಿ ಸಹ ಕಾರ್ಯದರ್ಶಿಯಾಗಿರುತ್ತಾರೆ. ಎಲ್ಲ ಸಹಾಯಕ ಚುನಾವಣಾಧಿಕಾರಿ ಹಾಗೂ ಮಂಗಳೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಡಾ. ವಸಂತ ಕುಮಾರ್ ಪೆರ್ಲ ಮತ್ತು ಹಿರಿಯ ಪತ್ರಕರ್ತ ರಘುರಾಮ್ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

