ಬಂಟ್ವಾಳ ಬಳಿ ರಿಕ್ಷಾ ಚಾಲಕನ ಹತ್ಯೆ
ಬಂಟ್ವಾಳ: ಆರು ವರ್ಷಗಳ ಹಿಂದೆ ಬಂಟ್ವಾಳ ಕೆಳಗಿನ ಪೇಟೆ ನಿವಾಸಿ, ರಿಕ್ಷಾ ಚಾಲಕ ಇಕ್ಬಾಲ್ ಎಂಬಾತನ ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ತಲವಾರಿನಿಂದ ಕಡಿದು ಕೊಲೆಗೈದ ಘಟನೆ ಶುಕ್ರವಾರ ಬೆಳಗಿನ ಜಾವ ಬಿ.ಸಿ. ರೋಡ್ ಸಮೀಪದ ಕಲ್ಪನೆ ರಿಕ್ಷಾ ನಿಲ್ದಾಣದಲ್ಲಿ ನಡೆದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪರಿಸರದಲ್ಲಿ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣಗೊಂಡಿತು. ಬೆಂಜನಪದವಿನ ಶಿವಾಜಿನಗರ ನಿವಾಸಿ ರಾಜ ಯಾನೆ ರಾಜೇಶ (38) ಕೊಲೆಗೀಡಾದವನು.
ಘಟನೆ ಹಿನ್ನೆಲೆ: ಈ ಹಿಂದೆ ಬಿ.ಸಿ. ರೋಡ್ನಲ್ಲಿ ಬಸ್ ಏಜೆಂಟ್ ಆಗಿದ್ದ ಈತ ಇದೀಗ ಕಲ್ಪನೆ ಪರಿಸರದಲ್ಲಿ ರಿಕ್ಷಾ ಚಾಲಕನಾಗಿ ದುಡಿಯುತ್ತಿದ್ದಾನೆ. ಬೆಳಗ್ಗೆ 6.45ರ ವೇಳೆಗೆ ಮನೆಯಿಂದ ಹೊರಟ ರಾಜೇಶ್ ಕಲ್ಪನೆಯ ರಿಕ್ಷಾ ನಿಲ್ದಾಣದಲ್ಲಿ ತನ್ನ ರಿಕ್ಷಾವನ್ನು ನಿಲ್ಲಿಸಿ, ಏಕಾಂಗಿಯಾಗಿ ಕುಳಿತಿದ್ದ. ಇದೇ ವೇಳೆ ಬೈಕ್ನಲ್ಲಿ ಬಂದ ಮೂವರು ಅಪರಿಚಿತರು ಏಕಾಏಕಿ ಈತನ ಮೇಲೆ ತಲವಾರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಪರಿಣಾಮ ರಾಜೇಶ್ ಗಂಭೀರ ಸ್ವರೂಪದ ಗಾಯಗೊಂಡು ಅಲ್ಲಿಯೇ ಮುಗ್ಗರಿಸಿ ಬಿದ್ದಿದ್ದಾನೆ. ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

