ಬಪ್ಪನಾಡು: ಮಹಾರಥೋತ್ಸವ
ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಮಹಾ ರಥೋತ್ಸವ ವಿಜ್ರಂಭಣೆಯಿಂದ ಜರುಗಿತು. ಬಲಿ ಉತ್ಸವದ ಬಳಿಕ ಓಕುಳಿ, ಪೇಟೆ ಸವಾರಿ, ದೇವಳದಲ್ಲಿ ಶ್ರೀ ದೇವಿ ಮತ್ತು ಸಸಿಹಿತ್ಲು ಶ್ರೀ ಭಗವತಿಯರ ಭೇಟಿ ಬಳಿಕ ಮಹಾ ರಥೋತ್ಸವ ಜರುಗಿತು. ಮಹಾರಥದ ಪ್ರದಕ್ಷಿಣೆ ಬಳಿಕ ಚಂದ್ರಶೇನ ಕುದ್ರುವಿನಲ್ಲಿ ಜಳಕದ ಬಳಿಕ ಬೆಳಗ್ಗೆ ದೇವಳದಲ್ಲಿ ಬಲಿ ಉತ್ಸವ ನಡೆದು ಧ್ವಜಾರೋಹಣ ನಡೆಯಿತು. ದೇವಳದ ಕಾರ್ಯನಿರ್ವಹಣಾಧಿಕಾರಿ ಬಿ. ನಟರಾಜು, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಎನ್.ಎಸ್. ಮನೋಹರ್ ಶೆಟ್ಟಿ ಇದ್ದರು.
'ಗ್ರಾಹಕರ ಶೋಷಣೆಯಿಂದ ಭ್ರಷ್ಟಾಚಾರ'
ಮಂಗಳೂರು: ಜನನ ಪ್ರಮಾಣಪತ್ರದಿಂದ ಮರಣ ಪ್ರಮಾಣಪತ್ರದವರೆಗೆ ಪ್ರತಿ ಹಂತದಲ್ಲೂ ಗ್ರಾಹಕರ ಶೋಷಣೆ ನಡೆಯುತ್ತಿದ್ದು, ಇದು ಭ್ರಷ್ಟಾಚಾರಕ್ಕೆ ಮೂಲ ಕಾರಣವಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಹೇಳಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವತಿಯಿಂದ ಇತ್ತೀಚೆಗೆ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಗ್ರಾಹಕರಿಗೆ ಸಂಬಂಧಪಟ್ಟ ಚಟುವಟಿಕೆಗಳ ಕುರಿತು ವಿಷಯಗಳನ್ನೊಳಗೊಂಡ ವೆಬ್ಸೈಟ್ ಉದ್ಘಾಟಿಸಿದರು. ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಎಂ.ಜೆ. ಸಾಲಿಯಾನ್, ಸಿಂಡಿಕೇಟ್ ಬ್ಯಾಂಕ್ ಮಾಜಿ ಅಧ್ಯಕ್ಷ ಡಾ.ಎನ್.ಕೆ. ತಿಂಗಳಾಯ, ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಸಿ. ಪ್ರಭು, ಆಹಾರ ನಾಗರಿಕ ಸರಬರಾಜು ಉಪನಿರ್ದೇಶಕ ಶರಣ ಬಸಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

