ಕಾಂಗ್ರೆಸ್ನಿಂದ ಬಡವರ ಮೂದಲಿಕೆ: ನಳಿನ್
ಮಂಗಳೂರು: ದೇಶದ ಬಡಜನತೆ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದು ನಿತ್ಯ ಹೊತ್ತಿನ ಊಟಕ್ಕೆ ಕಷ್ಟಪಡುವಂತಾಗಿದೆ. ದೇಶದ ನಾಯಕರು ಎನಿಸಿಕೊಂಡ ಕಾಂಗ್ರೆಸ್ ನೇತಾಗಳು ಬಡತನ ಜನರ ಮಾನಸಿಕತೆ ಎಂದು ಬಡವರನ್ನು ಮೂದಲಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಹೇಳಿದರು.
ಸುಳ್ಯ ಜಾಲ್ಸೂಲು ಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿ, ದೇಶದ ಆರ್ಥಿಕತೆ ಸುಧಾರಿಸಿ, ನಕ್ಸಲಿಸಂ ಮತ್ತು ಭಯೋತ್ಪಾದನೆಯನ್ನು ಕಠಿಣ ಕಾನೂನು ಮೂಲಕ ನಿಗ್ರಹಿಸಲು ಸಮರ್ಥ ನಾಯಕತ್ವ ಬೇಕಾಗಿದೆ. ಮೋದಿಯವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಗೆಲ್ಲಿಸಿ ಎಂದದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಂದರ್ಭ ಜಿಲ್ಲೆಯನ್ನು ಪ್ರವಾಸೋದ್ಯಮ ಕೇಂದ್ರ, ವಾಣಿಜ್ಯ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸಲು ಯೋಜನೆ ರೂಪಿಸಿ, ಅನುಷ್ಠಾನ ಹಾಗೂ ಬಂದರು, ರೈಲು, ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ವಿಧಾನ ಪರಿಷತ್ ಸದಸ್ಯ ಕೆ.ಮೋನಪ್ಪ ಭಂಡಾರಿ, ಎ.ವಿ.ತೀರ್ಥರಾಮ, ಕೇಶವ ಭಟ್ ಮುಳಿಯ, ಪಿ.ಜಿ.ಎಸ್.ಎನ್.ಪ್ರಸಾದ್, ಸಂಜೀವ ಮಠಂದೂರು, ರಾಕೇಶ್ ರೈ ಕೆಡಿಂಜೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

