ದಕ್ಷಿಣ ಕನ್ನಡ

ಎಸ್ಸೆಸ್ಸೆಲ್ಸಿ ಭಾಷಾ ಪರೀಕ್ಷೆ: 881 ಮಂದಿ ಗೈರು

Published On :

ಮಂಗಳೂರು/ ಉಡುಪಿ: ದ.ಕ.ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಪ್ರಥಮ ಭಾಷೆ ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಸಂಸ್ಕೃತ ವಿಭಾಗದಲ್ಲಿ 32138 ವಿದ್ಯಾರ್ಥಿಗಳಲ್ಲಿ 31465 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 673 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಬಂಟ್ವಾಳ- 110 ಮಂದಿ ಗೈರು: ಎಸ್ಸೆಸ್ಸೆಲ್ಸಿ ಪರೀಕ್ಷೆಯು ಶುಕ್ರವಾರ ಆರಂಭಗೊಂಡಿದ್ದು, ಬಂಟ್ವಾಳ ತಾಲೂಕಿನಲ್ಲಿ ಮೊದಲ ದಿನವೇ 110 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.
ತಾಲೂಕಿನಲ್ಲಿ ಒಟ್ಟು 6,090 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿತ್ತು. ಆದರೆ, ಮೊದಲ ದಿನವೇ 78 ವಿದ್ಯಾರ್ಥಿಗಳು ಹಾಗೂ 32 ವಿದ್ಯಾರ್ಥಿನಿಯರು ಗೈರು ಹಾಜರಾಗಿದ್ದಾರೆ.
ತಾಲೂಕಿನ 15 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದು, ತಹಸೀಲ್ದಾರ್ ಮಲ್ಲೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ, ಕಾರ್ಯನಿರ್ವಹಣಾಧಿಕಾರಿ ಸಿಫ್ರಿಯನ್ ಮಿರಾಂಡ ಮೊದಲಾದವರು ಪರೀಕ್ಷಾ ಕೇಂದ್ರಗಳ ಉಸ್ತುವಾರಿ ನೋಡಿಕೊಂಡರು. ಕೊಡಗು ಡಯಟ್‌ನಿಂದ ಬಂದ ಜಾಗೃತ ದಳದ ಅಧಿಕಾರಿಗಳೂ ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣೆ ನಡೆಸಿದರು. ಶುಕ್ರವಾರ ಪ್ರಥಮ ಭಾಷೆಯಾದ ಕನ್ನಡ, ಇಂಗ್ಲಿಷ್ ಹಾಗೂ ಸಂಸ್ಕೃತ ಪರೀಕ್ಷೆಗಳು ನಡೆದಿವೆ.
ಉಡುಪಿ- 208 ಗೈರು: ಉಡುಪಿ ಜಿಲ್ಲೆಯಲ್ಲಿ ಒಟ್ಟು 59 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಈ ಪರೀಕ್ಷೆಗೆ ಒಟ್ಟು 15,108 ವಿದ್ಯಾರ್ಥಿಗಳಲ್ಲಿ 14,975 ಹಾಜರಾಗಿದ್ದು, 133 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಇವರ ಜೊತೆಗೆ ಖಾಸಗಿಯಾಗಿ ಒಟ್ಟು 672 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು, ಅವರಲ್ಲಿ 597 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದು, 75 ಮಂದಿ ಗೈರು ಹಾಜರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.