ಮದ್ಯ ಅಕ್ರಮ ಮಾರಾಟ: ಒಬ್ಬನ ಸೆರೆ
ಕುಂದಾಪುರ: ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಗುಲ್ವಾಡಿ ಗ್ರಾಮದ ವಿಜಯ ಬ್ಯಾಂಕ್ ಬಳಿ ಗುರುವಾರ ನಡೆದಿದೆ. ಆರೋಪಿ ಬಾಲಕೃಷ್ಣ ಶೆಟ್ಟಿ ಎಂಬಾತ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಪಡೆದ ಕುಂದಾಪುರ ಠಾಣೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಮದ್ಯ ತುಂಬಿದ ಬಾಟಲಿ ಹಾಗೂ ರು. 600 ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಗಾರಿ: ನಾಲ್ವರ ಬಂಧನ
ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಬರಗೇರಿ ಆಶೋಕ್ ಶೆಟ್ಟಿ ಎಂಬವರ ಕೋಳಿ ಫಾರ್ಮ್ ಬಳಿ ಇರುವ ಕಾಡಿನಲ್ಲಿ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ ನಾಲ್ವರು ಆರೋಪಿಗಳನ್ನು ಗಂಗೊಳ್ಳಿ ಠಾಣಾ ಪೊಲೀಸರು ಬಂಧಿಸಿದ ಘಟನೆ ಗುರುವಾರ ನಡೆದಿದೆ. ಆರೋಪಿಗಳಾದ ಶಾವುಲ್ ಹಮೀದ್, ಮಹಮ್ಮದ್ ಇಲಿಯಾಸ್, ಹನೀಫ್, ರಫೀಕ್ ಇವರು ತಮ್ಮ ಸ್ವಂತ ಲಾಭಕಾಗಿ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದು, ಇದನ್ನು ಖಚಿತ ಪಡಿಸಿಕೊಂಡ ಗಂಗೊಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ರು. 2,700 ನಗದು ಹಾಗೂ ಆಟಕ್ಕೆ ಬಳಸಿದ ಇನ್ನಿತ್ತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಡಿಕ್ಕಿ; ವ್ಯಕ್ತಿಗೆ ಗಾಯ
ಬ್ರಹ್ಮಾವರ: ಉಪ್ಪೂರಿನಲ್ಲಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೋರ್ವರಿಗೆ ಟೆಂಪೋ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಬಸವ ಪೂಜಾರಿ ಅಲಿಯಾಸ್ ಭಾಸ್ಕರ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿ ಟೆಂಪೋ ಚಾಲಕ ಪ್ರಶಾಂತ ಟೆಂಪೋವನ್ನು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬಸವ ಪೂಜಾರಿ ಅಲಿಯಾಸ್ ಭಾಸ್ಕರ ಪೂಜಾರಿ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಭಾಸ್ಕರ ಜತ್ತನ್ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ನದಿಗೆ ಬಿದ್ದು ಸಾವು
ಬ್ರಹ್ಮಾವರ: ಇಲ್ಲಿನ ಆರೂರು ಗ್ರಾಮದ ಬೆಳ್ಮಾರು ಎಂಬಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಶವ ಶುಕ್ರವಾರ ಪತ್ತೆಯಾಗಿದೆ. ಮೃತರು ಸಂಕಿ ಪೂಜಾರಿ (76). ಗರುವಾರ ಸಂಜೆ ಬೈಲಿನ ಕಡೆಗೆ ಹೋಗಿದ್ದು, ಅಲ್ಲಿ ಕಾಲು ತೊಳೆಯಲೆಂದು ಹೊಳೆಗೆ ಇಳಿದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮನೆಯವರು ಹುಡುಕಾಡಿದರೂ ಶವ ಪತ್ತೆಯಾಗಿರಲಿಲ್ಲ. ಶುಕ್ರವಾರ ಶವ ಹೊಳೆ ಬದಿಯಲ್ಲಿ ಪತ್ತೆಯಾಗಿದೆ. ಸುಬ್ರಾಯ ಅವರ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

