ದಕ್ಷಿಣ ಕನ್ನಡ

ಟೆಂಪೊ ಹಾಯ್ದು ವ್ಯಕ್ತಿ ದುರ್ಮರಣ

Published On :

ಮಲ್ಪೆ: ಇಲ್ಲಿನ ಮೀನುಗಾರಿಕಾ ಬಂದರಿನಲ್ಲಿ ಟೆಂಪೊ ಅಡಿ ಮಲಗಿದ್ದ ವ್ಯಕ್ತಿಯೊಬ್ಬರು ಟೆಂಪೋ ಚಲಿಸಿದಾಗ ಅಡಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮೃತರು ಮುರುಗನ್, ತಮಿಳುನಾಡಿನ ಮಧುರೈ ನಿವಾಸಿ. ಇಬ್ರಾಹಿಂ ಹಾರುನ್ ಶೇಖ್ ಎಂಬವರು ಟೆಂಪೋವನ್ನು ನಿರ್ಲಕ್ಷ್ಯದಿಂದ ಏಕಾಏಕಿ ಹಿಂದಕ್ಕೆ ಚಲಾಯಿಸಿದಾಗ ಅದರಡಿ ಮಲಗಿದ್ದ ಮುರುಗನ್ ಮೇಲೆ ವಾಹನ ಹಾದುಹೋಯಿತು. ಪರಿಣಾಮ ಭುಜ, ಸೊಂಟ, ಮೊಣಕಾಲಿಗೆ ತೀವ್ರ ಗಾಯಗಳಾಗಿದ್ದ ಆತನನ್ನು ತಕ್ಷಣ ಅಂಬುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಮೇಶ ಆರ್. ಕರ್ಕೇರ ಎಂಬವರು ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಆರ್ಥಿಕ ಸಂಕಷ್ಟ: ಮಹಿಳೆ ಆತ್ಮಹತ್ಯೆ
ಕೋಟ: ಮೂಲತಃ ತಮಿಳುನಾಡಿನ ಮಹಿಳೆಯೊಬ್ಬರು ಆರ್ಥಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಮೃತರು ಮಂಜುಳಾ (30), ಈಕೆ ಪ್ರಸ್ತುತ ಪತಿಯೊಂದಿಗೆ ಕುಂದಾಪುರ ತಾಲೂಕಿನ ಬೇಳೂರು ಗ್ರಾಮದ ಮೊಗೆಬೆಟ್ಟು ಕಲ್ಲುಕ್ವಾರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ತನ್ನ ಗಂಡ ಆನಂದನ ಬೆನ್ನು ನೋವಿನ ಕಾರಣದಿಂದಾಗಿ ಸಂಸಾರ ನಿರ್ವಹಣೆ ಕಷ್ಟವಾಗಿ, ಇತ್ತೀಚೆಗೆ ಮಾನಸಿಕ ಅಸ್ವಸ್ಥಳಾಗಿದ್ದರು. ಇದೇ ಕಾರಣಕ್ಕೆ ಬುಧವಾರ ಸಂಜೆ ಮೊಗೆಬೆಟ್ಟು ಎಂಬಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುಳ್ಯ: ಗಾಯಾಳು ವಿದ್ಯಾರ್ಥಿ ಸಾವು
ಸುಳ್ಯ: ಓಮ್ನಿ ಮತ್ತು ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಪವನ್ ಬುಧವಾರ ರಾತ್ರಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಪಾಂಡಿಗದ್ದೆ ಶಾಲಾ ಶಿಕ್ಷಕ ಚಂದ್ರಶೇಖರ ಕುಕ್ಕುಪುಣಿಯವರ ಪುತ್ರ, ಸುಳ್ಯ ಕೆವಿಜಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಪವನ್ ಕಾಲೇಜು ಮುಗಿಸಿ ಬೈಕ್‌ನಲ್ಲಿ ಪಂಜದಲ್ಲಿರುವ ಮನೆಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬರುತ್ತಿದ್ದ ಓಮ್ನಿ ಡಿಕ್ಕಿ ಹೊಡೆದಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಪವನ್ ಮೃತದೇಹವನ್ನು ಗುರುವಾರ ತಂದೆಯ ಊರಾದ ಕಾಸರಗೋಡಿಗೆ ಕೊಂಡೊಯ್ದು ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.