ಎಎನ್‌ಎಫ್ ಸಿಬ್ಬಂದಿ ಬಿಡುಗಡೆ ಆಗ್ರಹಿಸಿ ಜಿಲ್ಲಾ ಬಂದ್ ವಿಹಿಂಪ ಎಚ್ಚರಿಕೆ
ಸುಳ್ಯ: ದನ ಕಳವು ಆರೋಪಿ ಕಬೀರ್‌ನನ್ನು ಎ.ಎನ್.ಎಫ್. ಸಿಬ್ಬಂದಿ ಎನ್ಕೌಂಟರ್ ಮಾಡಿದ ಬಳಿಕ ರಾಜ್ಯ ಸರ್ಕಾರ ಈ ದನಗಳ್ಳನನ್ನು ಹುತಾತ್ಮನಂತೆ ಬಿಂಬಿಸುತ್ತಿರುವುದು ಸರಿಯಲ್ಲ ಎಂದು ವಿಶ್ವ ಹಿಂದು ಪರಿಷತ್ ಜಿಲ್ಲಾ ಸಹಸಂಚಾಲಕ ಮಹೇಶ್ ರೈ ಮೇನಾಲ ಹೇಳಿದರು.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈತನಿಗೆ ನೀಡಿದ ಪರಿಹಾರ ವಾಪಾಸು ಪಡೆದು, ಸಿಐಡಿ ಕಸ್ಟಡಿಯಲ್ಲಿರುವ ಎ.ಎನ್.ಎಫ್. ಸಿಬ್ಬಂದಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಿ, ಜಿಲ್ಲಾ ಬಂದ್ ಕರೆ ನೀಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಮಲ್ಲಿಕಾರ್ಜುನ ಬಂಡೆ ಸತ್ತಾಗ ಹಿಂದೂ ಪರ ಸಂಘಟನೆಗಳ ಹೋರಾಟದ ಫಲವಾಗಿ ಮಾತ್ರ ಸರ್ಕಾರ ರು. 5 ಲಕ್ಷ ಪರಿಹಾರ ನೀಡಿತ್ತು. ಆದರೆ ಕಬೀರ್ ಸತ್ತ ದಿನಗಳೊಳಗೆ ರು. 10 ಲಕ್ಷ ಪರಿಹಾರ ನೀಡಿದೆ ಎಂದು ಅವರು ಹೇಳಿದರು.
ಬಂಟ್ವಾಳದ ಟೋಲ್‌ಗೇಟ್ ಧ್ವಂಸ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಹೀಗೆ ಈ ಸರ್ಕಾರ ನಿರಂತರವಾಗಿ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಾ ಹಿಂದೂಗಳ ದಮನ ನೀತಿ ಪ್ರೋತ್ಸಾಹಿಸುತ್ತಾ ಬಂದಿದೆ. ಆದರೆ ಯುವಕರ ಪಡೆ ಇದನ್ನು ಮೆಟ್ಟಿ ನಿಲ್ಲಲಿದೆ ಎಂದು ತಿಳಿಸಿದರು.
ಮಾದಕ ಜಾಲ: ಸುಳ್ಯದ ಕಾಲೇಜು ಕ್ಯಾಂಪಸ್‌ಗಳಲ್ಲಿ ಗಾಂಜಾ ಮತ್ತು ಅಫೀಮ್ ಮಾದಕ ವಸ್ತುಗಳ ಜಾಲ ತೀವ್ರವಾಗಿದೆ ಎಂದು ಹೇಳಿದರು.
ಇದು ಹಿಂದೂ ಹುಡುಗಿಯರನ್ನು ಪುಸಲಾಯಿಸಿ ಬೇರೆ ರಾಜ್ಯಗಳಿಗೆ ಕೊಂಡೊಯ್ದು ಅನೈತಿಕ ಚಟುವಟಿಕೆ ನಡೆಸುತ್ತಿರುವ ಕೃತ್ಯಗಳಿಗೂ ಕಾರಣವಾಗಿದೆ. ಇದರ ವಿರುದ್ಧ ನಾವು ಕ್ರಾಂತಿಕಾರಕ ಹೋರಾಟ ಮಾಡಲಿದ್ದೇವೆ ಎಂದು ಮಹೇಶ್ ಹೇಳಿದರು.
ಈ ಸಂದರ್ಭದಲ್ಲಿ ಬಜರಂಗದಳ ತಾಲೂಕು ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ನಗರ ಸಂಚಾಲಕ ಲತೀಶ್ ಗುಂಡ್ಯ, ವಿಶ್ವ ಹಿಂದೂ ಪರಿಷತ್ ನಗರಾಧ್ಯಕ್ಷ ಚಿದಾನಂದ ಕುದ್ಪಾಜೆ, ಭರತ್ ಅಡ್ಕಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

