ದೇಂದಬೆಟ್ಟು ದೇವಳದಲ್ಲಿ ನಾಗಮಂಡಲೋತ್ಸವ ಇಂದು
ಕಾರ್ಕಳ: ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಭಾನುವಾರ ಅಷ್ಟಪವಿತ್ರ ನಾಗಮಂಡಲೋತ್ಸವ ನಡೆಯಲಿದೆ. ಬೆಳಗ್ಗೆಯಿಂದ ಬ್ರಹ್ಮಾದಿ ದೇವರಿಗೆ 108 ಕಲಶಾಭಿಷೇಕ, ಆಶ್ಲೇಷಾ ಬಲಿ, ಪ್ರಸನ್ನ ಪೂಜೆ, ಮಧ್ಯಾಹ್ನ 1 ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ, ಸುಬ್ರಹ್ಮಣ್ಯದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಬಾಳೆಗಾರು ಮಠದ ರಘುಭೂಷಣ ತೀರ್ಥ ಸ್ವಾಮೀಜಿ, ಒಡಿಯೂರು ಗುರುದೇವಾನಂದ ಸ್ವಾಮೀಜಿ ಉಪಸ್ಥಿತರಿರುವರು. ನಾಗಮಂಡಲೋತ್ಸವಕ್ಕೆ ಭಾನುವಾರ ಬೆಳಗ್ಗೆ 10 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಸಾಣೂರು, ಮುರತ್ತಂಗಡಿ, ಧೂಪದಕಟ್ಟೆಗಳಿಂದ ಕ್ಷೇತ್ರಕ್ಕೆ ಬಸ್ನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬಾಬಾ ರಾಮ್ದೇವ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಬಂಟ್ವಾಳ: ಯೋಗ ಗುರು ಬಾಬಾ ರಾಮ್ದೇವ್ ಅವರ ವಿರುದ್ಧ ದಲಿತ ನಿಂದನೆ ಪ್ರಕರಣ ದಾಖಲಿಸಿ ಬಂಧಿಸಬೇಕು. ಇಲ್ಲವೇ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಬಿ.ಸಿ. ರೋಡ್ ತಾಲೂಕು ಕಚೇರಿ ಎದುರು ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ನ ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗದ ಆಶ್ರಯದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ, ಕೆಪಿಸಿಸಿ ಸದಸ್ಯ ಡಾ. ರಘು ಮಾತನಾಡಿದರು.
ಜಿ.ಪಂ. ಮಾಜಿ ಅಧ್ಯಕ್ಷ ಸೋಮನಾಥ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮಹಮ್ಮದ್, ಬಂಟ್ವಾಳ ಕ್ಷೇತ್ರ ಪರಿಶಿಷ್ಟ ಜಾತಿ- ಪಂಗಡ ಘಟಕದ ಅಧ್ಯಕ್ಷ ಜನಾರ್ದನ ಚೆಂಡ್ತಿಮಾರ್ ಮಾತನಾಡಿದರು. ಕಾಂಗ್ರೆಸ್ ಪರಿಶಿಷ್ಟ ಜಾತಿ- ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ಪದ್ಮನಾಭ ನರಿಂಗಾನ ಅಧ್ಯಕ್ಷತೆ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

