ಮಹಿಳೆಯರ ಅವಮಾನ ಕಾಂಗ್ರೆಸ್ ಸಂಸ್ಕೃತಿ'
ಸುಳ್ಯ: ಮಹಿಳೆಯರನ್ನು ಅವಮಾನಿಸುವುದು ಕಾಂಗ್ರೆಸ್ ಸಂಸ್ಕೃತಿಯೇ ಹೊರತು ಬಿಜೆಪಿಯದ್ದಲ್ಲ. ಬಿಜೆಪಿ ಕಾರ್ಯಕರ್ತರ ಮೇಲೆ ಮಹಿಳಾ ದೌರ್ಜನ್ಯದ ಸುಳ್ಳು ಪ್ರಕರಣ ದಾಖಲಿಸಿದರೆ ಬಿಜೆಪಿ ಮಹಿಳಾ ಮೋರ್ಚಾದಿಂದ ತಕ್ಕ ಉತ್ತರ ನೀಡುವುದಾಗಿ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ಶಶಿಧರ್ ಎಚ್ಚರಿಸಿದ್ದಾರೆ.ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಮಹಿಳಾ ದೌರ್ಜನ್ಯ ಮಾಡುತ್ತಾರೆ ಎಂದು ಕಾಂಗ್ರೆಸ್ನವರು ಹೇಳಿದ್ದರು. ಆದರೆ ಇಂತಹ ಕೆಲಸಗಳನ್ನು ಕಾಂಗ್ರೆಸ್ ಅಲ್ಲದೆ ಇನ್ಯಾರಿಗೂ ಮಾಡಲು ಸಾಧ್ಯವಿಲ್ಲ ಎಂದರು. ಕೆಲ ಸಮಯದ ಹಿಂದೆ ತಾ.ಪಂ. ಅಧ್ಯಕ್ಷೆ ವೇದಿಕೆಯಲ್ಲಿದ್ದಾಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಅವರನ್ನು ಕುಳಿತ ಸೀಟ್ನಿಂದ ಎಬ್ಬಿಸಿ ಅಗೌರವ ತೋರಿದ್ದಾರೆ. ಇತ್ತೀಚೆಗೆ ಎಡಮಂಗಲದಲ್ಲಿ ಜಿ.ಪಂ. ಸದಸ್ಯೆಯೊಬ್ಬರು ಎಡಮಂಗಲದ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಹೊರಿಸಿ ಮಹಿಳಾ ನಿಂದನೆ ಪ್ರಕರಣ ದಾಖಲಿಸಿ ಕಾನೂನು ದುರುಪಯೋಗ ಮಾಡಿದ್ದಾರೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

