ದಕ್ಷಿಣ ಕನ್ನಡ

ಸುಳ್ಯ: ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

Published On :

ಸುಳ್ಯ: ತಾಲೂಕಿನಾದ್ಯಂತ ಗುರುವಾರ ಬೆಳಗ್ಗಿನಿಂದಲೇ ಸುರಿದ ಜಡಿಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಳಗ್ಗಿನಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದ ಅಲ್ಲಲ್ಲಿ ತಗ್ಗು ಪ್ರದೇಶಗಳು ನೀರಿನಿಂದ ತುಂಬಿವೆ. ಮಳೆ ನೀರು ಚರಂಡಿ ಬಿಟ್ಟು ರಸ್ತೆಯಲ್ಲೇ ಹರಿಯತೊಡಗಿದೆ. ಮಣ್ಣು ತೇವಗೊಂಡು ಅಲ್ಲಲ್ಲಿ ವಾಹನಗಳು ಮಣ್ಣಿನಲ್ಲಿ ಹೂತುಹೋಗಿವೆ. ಕೆಲವೆಡೆ ಗಾಳಿಗೆ ಮರಗಳು ರಸ್ತೆಗೆ ಉರುಳಿ ಬಿದ್ದು ಸಂಚಾರಕ್ಕೆ ತಡೆಯುಂಟಾಗಿದೆ. ಗುರುವಾರ ಅಲ್ಲಲ್ಲಿ ವಿವಾಹ ಸಮಾರಂಭಗಳು ನಡೆದಿದ್ದು, ವರ್ಷಧಾರೆಯಿಂದ ಇವರಿಗೂ ತೊಂದರೆ ಉಂಟಾಯಿತು. ಪೈಚಾರಿನಲ್ಲಿ ನೂತನ ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಹಳೆ ಸೇತುವೆ ಕಿರಿದಾಗಿದ್ದು, ಇಲ್ಲಿ ಟ್ರಾಫಿಕ್‌ಜಾಮ್ ಉಂಟಾಗುತ್ತಿದೆ.
ಮನೆಗೆ ಹಾನಿ: ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಬೆಳ್ಯಪ್ಪ ಆಚಾರಿ ಎಂಬವರ ಮನೆಗೆ ಮಂಗಳವಾರ ಸಿಡಿಲು ಬಡಿದು ಹಾನಿಯಾಗಿದೆ.  
  ಸಿಡಿಲು ಬಡಿದ ರಭಸಕ್ಕೆ ಮನೆಗೆ ಅಳವಡಿಸಲಾದ ವಿದ್ಯುತ್ ಸಂಪರ್ಕ, ವಯರಿಂಗ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯ ಛಾವಣಿ ಶಿಥಿಲಗೊಂಡಿದ್ದು, ಗೋಡೆಗಳಿಗೆ ಹಾನಿಯಾಗಿದೆ. ಕುಡಿಯುವ ನೀರಿನ ಯಂತ್ರ ಸುಟ್ಟು ಹೋಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.