ಅಂತೂ ಸ್ಟ್ರಾಂಗ್ ರೂಮ್ ಪೊಲೀಸರ ರಕ್ತ ತಪಾಸಣೆ ಮಾಡಿದ್ರು
ಮಂಗಳೂರು: ಬೊಂದೆಲ್ ಮಹಾತ್ಮ ಗಾಂಧಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಮತಯಂತ್ರ ಕಾಯುವ ಪೊಲೀಸರಿಗೆ ಮಲೇರಿಯಾ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆ 27 ಸಿಬ್ಬಂದಿಗಳ ರಕ್ತ ತಪಾಸಣೆ ನಡೆಸಿತು.
ಪೊಲೀಸರಿಗೆ ಮಲೇರಿಯಾ ಜ್ವರ ಬಂದಿರುವ ಹಾಗೂ ಮೂಲ ಸೌಕರ್ಯ ಕೊರತೆ ಕುರಿತು 'ಕನ್ನಡಪ್ರಭ' ಭಾನುವಾರ ವಿಶೇಷ ವರದಿ ಪ್ರಕಟಿಸಿತ್ತ್ತು. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಮತ್ತು ಆರೋಗ್ಯಾಧಿಕಾರಿ ಡಾ. ಶಿವಕುಮಾರ್ ಸಮ್ಮುಖದಲ್ಲಿ 27 ಪೊಲೀಸರ ರಕ್ತ ತಪಾಸಣೆ ನಡೆಸಲಾಯಿತು. ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, 'ಪೊಲೀಸರಿಗೆ ಜ್ವರ ಬಂದಿರುವ ಕುರಿತು ಮಾಹಿತಿ ಬಂದಿದ್ದು, ಕೂಡಲೇ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ತಪಾಸಣೆ ನಡೆಸಲಾಗಿದೆ. ಇಲ್ಲಿ ಊಟ, ವಸತಿ ವ್ಯವಸ್ಥೆ ಉತ್ತಮವಾಗಿದೆ. ಹೆಚ್ಚಿನ ಸೌಲಭ್ಯ ಬೇಕಾದಲ್ಲಿ ಜಿಲ್ಲಾಡಳಿತ ವತಿಯಿಂದ ಒದಗಿಸಲಾಗುವುದು' ಎಂದರು. ಆರೋಗ್ಯಾಧಿಕಾರಿ ಡಾ. ಶಿವಕುಮಾರ್ ಮಾತನಾಡಿ, 'ರಕ್ತ ತಪಾಸಣೆ ಮಾಡಿಸಿದ್ದು, ಮಲೇರಿಯಾ ಜ್ವರ ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುವುದು. ಪರಿಸರದ ಸುತ್ತಮುತ್ತ ಶುಚಿತ್ವ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ' ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

