ಸ್ವಂತ ಬಲದಲ್ಲಿ ಎನ್ಡಿಎ ಅಧಿಕಾರಕ್ಕೆ: ಡೀವಿ
ಮಂಗಳೂರು: ಈ ಬಾರಿ ಕೇಂದ್ರದಲ್ಲಿ ಎನ್ಡಿಎ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ. ಭಾನುವಾರ ಮಂಗಳೂರಲ್ಲಿ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಸರ್ಕಾರ ರಚನೆಗೆ ಬೆಂಬಲಕ್ಕಾಗಿ ಯಾರಲ್ಲೂ ಭಿಕ್ಷೆ ಬೇಡುವ ಪ್ರಮೇಯವೇ ಇಲ್ಲ. ಸ್ವಂತ ಬಲದಲ್ಲಿ ಸರ್ಕಾರ ರಚಿಸಲು ನಾವು ಶಕ್ತರಾಗುತ್ತೇವೆ. ಬಿಜೆಪಿ 250ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಎನ್ಡಿಎ 300ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದರು. ವಾರಾಣಸಿಯಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ತಾನು ಭಾಗವಹಿಸಿದ್ದೆ. ಅಲ್ಲಿ ನರೇಂದ್ರ ಮೋದಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆಎಂದು ಹೇಳಿದರು.
ಸಚಿವರು ನಿಷ್ಕ್ರಿಯರು: ಮೇ 13ರಂದು ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಲಿದೆ. ಆದರೆ ರಾಜ್ಯದ ಜನತೆಯ ಸ್ಥಿತಿ ಅಧೋಗತಿಗೆ ಇಳಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದ ಬಹುತೇಕ ಸಚಿವರು ನಿಷ್ಕ್ರಿಯರಾಗಿದ್ದಾರೆ ಎಂದು ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

