ದ್ವಿಚಕ್ರ ವಾಹನ ಅಪಘಾತ: ಮೂವರಿಗೆ ಗಾಯ
ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಎಂಬಲ್ಲಿ ಹೋಂಡಾ ಆಕ್ಟೀವಾ ಅಪಘಾತಕ್ಕೀಡಾಗಿ ದಂಪತಿ ಮತ್ತು ಮಗುವಿಗೆ ಗಾಯಗಳಾದ ಘಟನೆ ಸಂಭವಿಸಿದೆ. ಪೆರ್ನೆಯಿಂದ ನೆಲ್ಯಾಡಿಯತ್ತ ದ್ವಿ ಚಕ್ರವಾಹನದಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಿಂದ ಮಾಜಿ ಸೈನಿಕ ಇಸ್ಮಾಯಿಲ್ ಮತ್ತವರ ಪತ್ನಿ ಅಸ್ಮಾ (32), ಮಗು ಫಮೀಶ್ (5) ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರು ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಕಾರು ಮುಖಾಮುಖಿ: ಇಬ್ಬರು ಗಾಯ
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉದನೆ ಎಂಬಲ್ಲಿ ಕಾರುಗಳೆರಡು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನ ಕೆಂಗೇರಿ ನಿವಾಸಿ ಸ್ವಾಮಿ (31) ಮತ್ತು ಇನ್ನೊಂದು ಕಾರಿನಲ್ಲಿದ್ದ ಮಂಡ್ಯ ನಿವಾಸಿ ವೆಂಕಟೇಶ್ (36) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮರಳು ಅಕ್ರಮ ಸಾಗಾಟ: ವಾಹನ ಜಪ್ತಿ
ಉಡುಪಿ: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸೋಮವಾರ ರಾಷ್ಟ್ರೀಯ ಹೆದ್ದಾರಿಯ ಅಂಬಾಗಿಲು ಬಳಿ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸಿ, ಪರವಾನಗಿ ಇಲ್ಲದೆ ಸಾಮಾನ್ಯ ಮರಳು ಸಾಗಿಸುತ್ತಿದ್ದ 1 ಲಾರಿಯನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ ಪರವಾನಗಿ ಇಲ್ಲದೇ ಕಟ್ಟಡ ಕಲ್ಲು ಸಾಗಿಸುತ್ತಿದ್ದ 1 ಲಾರಿಗಳಿಗೆ ಸ್ಥಳದಲ್ಲೇ ದಂಡ ವಿಧಿಸಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
---------
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

