ಕಂದಾಯ ಅದಾಲತ್ ಜಿಲ್ಲೆಗೆ ವಿಸ್ತರಣೆ: ಜಿಲ್ಲಾಧಿಕಾರಿ ಇಬ್ರಾಹಿಂ
ಬೆಳ್ತಂಗಡಿ: ಆರ್ಟಿಸಿಯ ತಪ್ಪುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾದ ಕಂದಾಯ ಅದಾಲತ್ ಅನ್ನು ಜಿಲ್ಲೆಗೆ ವಿಸ್ತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಹೇಳಿದ್ದಾರೆ.
ಅವರು ಮಂಗಳವಾರ ಗುರುವಾಯನಕೆರೆ ಕುಲಾಲ ಭವನದಲ್ಲಿ ಕಂದಾಯ ಇಲಾಖೆ ವತಿಯಿಂದ ನಡೆಸಲಾದ ಕಂದಾಯ ಅದಾಲತ್ನಲ್ಲಿ ಮಾತನಾಡಿದರು.
ರಾಜ್ಯಾದ್ಯಂತ ಶೇ.25ರಷ್ಟು ಆರ್ಟಿಸಿಯಲ್ಲಿ ಲೋಪದೋಷಗಳು, ತಪ್ಪುಗಳಿವೆ. ಕೋಲಾರದಲ್ಲಿ ಆಂದೋಲನದ ರೀತಿಯಲ್ಲಿ ಆರ್ಟಿಸಿ ತಪ್ಪುಗಳನ್ನು ಸರಿಪಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಪುತ್ತೂರು ಉಪವಿಭಾಗದಲ್ಲಿ ಈ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಆರ್ಟಿಸಿಯಲ್ಲಿ ಸಣ್ಣಪುಟ್ಟ ತಪ್ಪುಗಳನ್ನು ಕಂದಾಯ ಅದಾಲತ್ನಲ್ಲಿ ಸರಿಪಡಿಸಲಾಗುವುದು. ಇದರಿಂದ ಅರ್ಜಿ ಸಲ್ಲಿಸಿ ಕಚೇರಿಗೆ ಅಲೆದಾಡುವುದು ತಪ್ಪಲಿದೆ. ಇಲ್ಲಿನ ಕುಂದು ಕೊರತೆಗಳನ್ನು ಮುಂದಿನ ಅದಾಲತ್ಗಳಲ್ಲಿ ಸರಿಪಡಿಸಲಾಗವುದು ಎಂದು ತಿಳಿಸಿದರು.
ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ ಮಾತನಾಡಿ, ಪಡಂಗಡಿ, ಗರ್ಡಾಡಿ, ಕುವೆಟ್ಟು, ಮೇಲಂತಬೆಟ್ಟು, ಮುಂಡೂರು, ಸವಣಾಲು ಗ್ರಾಮಗಳ ವ್ಯಾಪ್ತಿಯಲ್ಲಿ ಕಂದಾಯ ಅದಾಲತ್ ನಡೆಸಲಾಗಿದ್ದು, ಸುಮಾರು 311 ಅರ್ಜಿಗಳು ಬಂದಿದೆ. ಈಗಾಗಲೇ 20 ಪ್ರಕರಣಗಳನ್ನು ಸರಿಪಡಿಸಲಿ ಭೂಮಿಗೆ ಎಂಟ್ರಿ ಮಾಡಲಾಗಿದೆ. ಇನ್ನು 3- 4 ದಿನದಲ್ಲಿ ಅರ್ಜಿ ನೀಡಿದವರಿಗೆ ಆರ್ಟಿಸಿ ನೀಡುವ ಕೆಲಸ ಮಾಡುವುದಾಗಿ ತಿಳಿಸಿದರು.
ತಹಸೀಲ್ದಾರ್ ಸಿ.ಆರ್. ಶ್ರೀನಿವಾಸ್, ಕಂದಾಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಕೆ.ಎಸ್. ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

