ದಕ್ಷಿಣ ಕನ್ನಡ

ಜನ ವಿರೋಧಿ ಯೋಜನೆಗಳಿಗೆ ಅವಕಾಶ ನೀಡುವುದಿಲ್ಲ: ನಳಿನ್

Published On :

ಸುಳ್ಯ: ಜಿಲ್ಲೆಯಲ್ಲಿ ಯಾವುದೇ ಜನ ವಿರೋಧಿ ಯೋಜನೆಗೆ ಅವಕಾಶ ನೀಡುವುದಿಲ್ಲ. ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೂ ಅವಕಾಶ ಇಲ್ಲ. ಇಲ್ಲಿನ ಪ್ರಧಾನ ಬೆಳೆ ಅಡಕೆ ಬೆಳೆಗಾರರ ಹಿತ ಕಾಪಾಡಲು ಹೋರಾಟ ನಡೆಸುತ್ತೇನೆ ಎಂದು ನೂತನ ಸಂಸದ ನಳಿನ್ ಕುಮಾರ್ ಕಟೀಲು ಭರವಸೆ ನೀಡಿದ್ದಾರೆ.
ನಗರದಲ್ಲಿ  ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ನಳಿನ್, ಮೋದಿ ಅಲೆ, ರಾಜ್ಯ ಮತ್ತು ಕೇಂದ್ರ ಕಾಂಗ್ರೆಸ್ ಸರ್ಕಾರದ ವಿರೋಧಿ ಅಲೆ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿಗೆ ಜಯ ಸಿಕ್ಕಿದೆ. ತನ್ನ ಗೆಲವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ ಎಂದರು.
ಜಿಲ್ಲೆಗೆ ಅನೇಕ ಹೊಸ ಯೋಜನೆ ತಂದು ಜನರ ಕೆಲಸ ಮಾಡುತ್ತೇನೆ. ಅದರಲ್ಲಿ ಮುಖ್ಯವಾಗಿ ವಿಶೇಷ ಕೃಷಿ ವಲಯ ಸ್ಥಾಪನೆ, ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆ ಶೀಘ್ರ ಒತ್ತು, ಬಂದರು, ವಿಮಾನ ನಿಲ್ದಾಣ ಅಭಿವೃದ್ಧಿ, ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಅವಕಾಶ ನೀಡಲಾಗುವುದು ಎಂದು ನಳಿನ್ ಹೇಳಿದರು.
ಈ ಕ್ಷೇತ್ರದವರು ಮೂರು ಮಂದಿ ಸಂಸದರಾಗಿದ್ದೇವೆ. ಶೋಭಾ ಕರಂದ್ಲಾಜೆ ಮತ್ತು ಡಿ.ವಿ. ಸದಾನಂದ ಗೌಡ ಅವರು ಬೇರೆ ಕ್ಷೇತ್ರದಲ್ಲಿ ಗೆದ್ದು ನಮಗೆ ಕೀರ್ತಿ ತಂದಿದ್ದಾರೆ. ನಮ್ಮೆಲ್ಲರ ಮಾರ್ಗದರ್ಶಕ ಹಿರಿಯಣ್ಣ ಡಿ.ವಿ. ಸದಾನಂದ ಗೌಡ ಕೇಂದ್ರ ಮಂತ್ರಿ ಆಗಬೇಕು. ಆಗುತ್ತಾರೆ ಕೂಡಾ. ಆ ಮೂಲಕ ಇನ್ನಷ್ಟು ಅಭಿವೃದ್ಧಿ ಇಲ್ಲಿ ಆಗಲಿದೆ ಎಂದು ನಳಿನ್ ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್. ಅಂಗಾರ, ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ, ತಾಲೂಕು ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮುಖಂಡರಾದ ಎ.ವಿ. ತೀರ್ಥರಾಮ, ಮುಳಿಯ ಕೇಶವ ಭಟ್, ವೆಂಕಟ್ ದಂಬೆಕೋಡಿ, ಶೈಲೇಶ್ ಅಂಬೆಕಲ್ಲು, ಉಮೇಶ್ ವಾಗ್ಲೆ, ವಿನಯ ಮುಳುಗಾಡು, ವೆಂಕಟ್ ವಳಲಂಬೆ, ಪ್ರಕಾಶ್ ಹೆಗ್ಡೆ, ಪಿ.ಕೆ. ಉಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.