ಶಾಲೆ ಪುನಾರಂಭ: ಮಕ್ಕಳ ಸ್ವಾಗತಕ್ಕೆ ಸಿದ್ಧತೆ
ಪುತ್ತೂರು: ಬೇಸಿಗೆ ರಜೆ ಮುಗಿದು ಶನಿವಾರ ಎಲ್ಲ ಶಾಲೆಗಳು ಪುನಾರಂಭಗೊಳ್ಳಲಿದ್ದು ಎಲ್ಲಾ ಜನಪ್ರತಿನಿಧಿಗಳು, ಶಿಕ್ಷಣ ಇಲಾಖಾಧಿಕಾರಿಗಳು, ದಾನಿಗಳು, ಪೋಷಕರು, ಹೆತ್ತವರು, ಶಾಲಾಭಿವೃದ್ಧಿ ಸಮಿತಿಯವರು ಈ ದಿವನ್ನು ಸಂಭ್ರಮದಿಂದ ಆಚರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ವಿನಂತಿಸಿದ್ದಾರೆ.
ತಾಲೂಕಿನಲ್ಲಿ ಒಟ್ಟು 308 ಶಾಲೆಗಳಿದ್ದು ಇದರಲ್ಲಿ ಸುಮಾರು 50,865 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.
ಈ ವರ್ಷ ಅಂದಾಜು ಸುಮಾರು 4650 ಮಕ್ಕಳು ಶಾಲೆಗೆ ಸೇರ್ಪಡೆಗೊಳ್ಳಲಿದ್ದಾರೆ. ಈಗಾಗಲೇ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಎಲ್ಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಉಚಿತ ಸಮವಸ್ತ್ರವನ್ನು ಸಮರ್ಪಕವಾಗಿ ತಲುಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದೇ ಶಾಲಾ ಆರಂಭೋತ್ಸವದ ಸಂಭ್ರಮ. ಪುತ್ತೂರು ತಾಲೂಕು ಮಟ್ಟದ ಆರಂಭೋತ್ಸವ ಕಾವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಹಾಗೆಯೇ ಪ್ರತಿ ಶಾಲೆಯಲ್ಲಿಯೂ ವಿಭಿನ್ನ ರೀತಿಯಲ್ಲಿ ಕಾರ್ಯಕ್ರಮ ನಡೆಸುವ ಮೂಲಕ ಮಕ್ಕಳನ್ನು ಸ್ವಾಗತಿಸಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್.ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

