ದಾವಣಗೆರೆ

ಬೇಸಿಗೆ ಬೆಳೆ ನಿರ್ವಹಣೆ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಿ: ಜುಂಜಾನಾಯ್ಕ

Published On :

ಹೊನ್ನಾಳಿ: ತಾಲೂಕನ್ನು ಬರಗಾಲಪೀಡಿತ ತಾಲೂಕು ಎಂದು ಘೋಷಿಸಿರುವ ಕಾರಣ ಕೃಷಿ ಇಲಾಖೆ ಅಧಿಕಾರಿಗಳು ಬೇಸಿಗೆ ಬೆಳೆ ನಿರ್ವಹಣೆ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಪ್ರಭಾವತಿ ಜುಂಜಾನಾಯ್ಕ ಹೇಳಿದರು.
ಕೃಷಿ ಇಲಾಖೆಯಿಂದ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ವಿವಿಧ ಕೃಷಿ ಉಪಕರಣಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಿ ಮಾತನಾಡಿದರು.
ಸಬ್ಸಿಡಿ ಉಪಕರಣ: ಎಸ್‌ಸಿಪಿ ಯೋಜನೆಯಡಿ ಒಬ್ಬ ಫಲಾನುಭವಿಗೆ 1 ತಾಡಪಾಲು, 50 ಕೆ.ಜಿ ದಾಸ್ತಾನು ಕಣಜವನ್ನು ರೈತರ ಹೊಂದಾಣಿಕೆ ಹಣ ರು. 750ಗಳನ್ನು ಕಟ್ಟಿಸಿಕೊಂಡು ಶೇ.75ರಷ್ಟು ಸಬ್ಸಿಡಿಯಲ್ಲಿ ಉಪಕರಣಗಳನ್ನು ವಿತರಿಸಿದರು.
ಟಿಎಸ್‌ಪಿ ಯೋಜನೆಯಡಿ ಒಬ್ಬ ಫಲಾನುಭವಿಗೆ 16 ಲೀಟರ್ ಸಾಮರ್ಥ್ಯದ ಕೈಚಾಲಿತ ಕೀಟನಾಶಕ ಸಿಂಪರಣೆ  ಕ್ಯಾನ್ ಮತ್ತು ಒಂದು ತಾಡಪಾಲು, ರೈತರ ವಂತಿಕೆ ರು. 1250 ಜಮಾ ಮಾಡಿಸಿಕೊಂಡು ಶೇ.75ರಷ್ಟು ಸಬ್ಸಿಡಿ ದರದಲ್ಲಿ ಕೃಷಿ ಉಪಕರಣಗಳನ್ನು ವಿತರಿಸಲಾಯಿತು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ವಿಶಾಲಾಕ್ಷಮ್ಮ, ಅಲ್ಪರ್ಟ್ ಸದಸ್ಯ ಅನಂದ್, ದಾಸರಹಳ್ಳಿ ರಮೇಶ್,  ಕಾಂತರಾಜ್, ಸುರೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್. ಹುಲಿರಾಜ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರೇವಣಸಿದ್ದನಗೌಡ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.