ಕೆರೆಗಳಿಗೆ ನದಿ ನೀರು ಬಜೆಟ್ ಸೇರ್ಪಡೆ: ರೆಡ್ಡಿ ಸಂತಸ
ಹರಪನಹಳ್ಳಿ: ತಾಲೂಕಿನ 60 ಕೆರೆಗಳಿಗೆ ತುಂಗ- ಭದ್ರ ನದಿ ನೀರು ತುಂಬಿಸುವ ಯೋಜನೆಯನ್ನು ಬಜೆಟ್ ನಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು ಶಾಸಕ ಜಿ.ಕರುಣಾಕರ ರೆಡ್ಡಿ ತಿಳಿಸಿದ್ದಾರೆ. ಅವರು ಈ ಕುರಿತು ದೂರವಾಣಿ ಮೂಲಕ ಸಂತಸ ಹಂಚಿಕೊಂಡು, ತಾಲೂಕಿನ ಜನತೆಗೆ ಇಂದು ಸುವರ್ಣಕ್ಷರ ದಿನ ವೆಂದು ಅಭಿಪ್ರಾಯ ಪಟ್ಟರು.
ನದಿ ನೀರು ತುಂಬಿಸುವ ಯೋಜನೆ ರೂಪಿಸಿದ್ದೇವು. ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನಮ್ಮ ಕೋರಿಕೆಯನ್ನು ಪುರಸ್ಕರಿಸಿ ಬಜೆಟ್ ನಲ್ಲಿ ಸೇರ್ಪಡೆಗೊಳಿಸಿದ್ದಾರೆ. ಶಾಶ್ವತ ಯೋಜನೆಗೆ ಕಾರಣರಾದ ಅವರಿಗೆ ತಾಲೂಕಿನ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶಾಸಕರು ತಿಳಿಸಿದರು. ಕೆರೆಗಳಿಗೆ ನದಿ ನೀರು ತುಂಬಿಸುವ ಯೋಜನೆ ಬಜೆಟ್ ನಲ್ಲಿ ಸೇರ್ಪಡೆ ಗೊಂಡಿರುವುದು ಪ್ರಕಟವಾಗುತ್ತಿದ್ದಂತೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂತಸ ಹಂಚಿಕೊಂಡರು. ಬಾಗಳಿ ಕೊಟ್ರೇಶಪ್ಪ, ಕೊಂಗನಹೊಸೂರು ಶಿವಣ್ಣ, ಕಣವಿಹಳ್ಳಿ ಮಂಜುನಾಥ, ಕೆ. ರಾಘವೇಂದ್ರಶೆಟ್ಟಿ, ಓಂಕರಗೌಡ, ನರಸಿಂಹಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

