ದಾವಣಗೆರೆ

ಅಫ್ಜಲ್‌ಗೆ ಗಲ್ಲು: ಸ್ವಾಗತ, ಮೆರವಣಿಗೆ

Published On :

ಹೊನ್ನಾಳಿ: 2001ರಲ್ಲಿ ಸಂಸತ್ ಭವನದ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಮುಖ ಆರೋಪಿ ಅಫ್ಜಲ್ ಗುರುಗೆ ಗಲ್ಲು ಶಿಕ್ಷೆ ಜಾರಿ ಮಾಡಿದ್ದನ್ನು ಸ್ವಾಗತಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ವಿಜಯೋತ್ಸವ, ಮೆರವಣಿಗೆ ನಡೆಸಿ ಪಟಾಕಿಸಿಡಿಸಿ ಸಂಭ್ರಮಿಸಿದರು.
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ತಾಲೂಕು ಸಂಚಾಲಕ ವಸಂತ ಗುಡ್ಡಜ್ಜಿ ಮಾತನಾಡಿ, ರಾಷ್ಟ್ರದ ಹೆಮ್ಮೆಯ ಸಂಕೇತವಾದ ಸಂಸತ್ ಭವನದ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ರಾಷ್ಟ್ರದ್ರೋಹ ಕೃತ್ಯಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ, ನೆಮ್ಮದಿ ಕದಡುವ ಕೃತ್ಯ ನಡೆಸಿದ ಅಫ್ಜಸಲ್ ಗುರುಗೆ ನ್ಯಾಯಾಂಗ ವ್ಯವಸ್ಥೆ ಕಡೆಗೂ ಗಲ್ಲು ಶಿಕ್ಷೆ ವಿಧಿಸಿದ್ದು ರಾಷ್ಟ್ರದ ಜನತೆ ಸಂತಸಪಡುವಂತಾಗಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಅತ್ಯಾಚಾರ, ಭಯೋತ್ಪಾದನೆಯಂತಹ ಕ್ರಿಮಿನಲ್ ಪ್ರಕರಣಗಳಿಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಶೀಘ್ರವಾಗಿ ಪ್ರಕರಣದ ವಿಚಾರಣೆ ನಡೆಸಿ ಶಿಕ್ಷೆ ನೀಡುವ ವ್ಯವಸ್ಥೆ ತ್ವರಿತವಾಗಿ ಜಾರಿಯಾಗಬೇಕಿದ್ದು ಈ ಬಗ್ಗೆ ಸಂಸತ್‌ನಲ್ಲಿ ಕಾನೂನು ತಿದ್ದುಪಡಿ ತರುವ ಬಗ್ಗೆ ಸರ್ವಪಕ್ಷಗಳು ಪಕ್ಷಾತೀತವಾಗಿ ಹೋರಾಟ ನಡಸಬೇಕಾಗಿದೆ ಎಂದು ತಿಳಿಸಿದರು.
ಎಬಿವಿಪಿ ಮುಖಂಡ ಮುಂಜುನಾಥ್, ಪಿ.ಎಚ್.  ತಿಮ್ಮೇಶ್, ಕೆಂಚಪ್ಪ, ಕರವೇ ಸಂಚಾಲ ಮಂಜುನಾಥ್ ಮೋಹನ್ ಶ್ರೀನಿವಾಸ್ ಚಂದ್ರು ಮುಂತಾದವರು ಪಾಲ್ಗೊಂಡಿದ್ದರು.
ಉಭಯ ಸಂಘಟೆಗಳ ನೂರಾರು ಯುವಕರು ಸ್ಥಳೀಯ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಭಾರಿ ಪಟಾಕಿ ಸಿಡಿಸಿ ಸಂಭ್ರಮಿಸಿ ನಂತರ ತಾಲೂಕು ಕಚೇರಿ ವೃತ್ತಕ್ಕೆ ಆಗಮಿಸಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.