4 ಕಡೆ ಪಂಚಮಸಾಲಿ ಶಾಖಾ ಮಠ
ದಾವಣಗೆರೆ: ಹರಿಹರ ಪೀಠ ಕೇಂದ್ರವಾಗಿಟ್ಟುಕೊಂಡು, ರಾಜ್ಯದ ನಾಲ್ಕು ಕಡೆ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ಶಾಖಾ ಮಠ ಸ್ಥಾಪಿಸುವ ಚಿಂತನೆ ಇದೆ ಎಂದು ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಪೀಠದ 4 ಪೀಠಗಳನ್ನು ವಿವಿಧೆಡೆ ಸ್ಥಾಪಿಸುವ ಚಿಂತನೆ ಸಮಾಜ ಹೊಂದಿದೆ. ಈಗಾಗಲೇ ಈ ಬಗ್ಗೆ ಚರ್ಚೆಗಳನ್ನು ನಡೆಸಲಾಗುತ್ತಿದೆ ಎಂದರು.
ಸದ್ಯಕ್ಕೆ ಹರಿಹರ ತಾ. ಹನಗವಾಡಿ ಸಮೀಪದ ಪಂಚಮಸಾಲಿ ಗುರುಪೀಠದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಒತ್ತು ನೀಡಿದ್ದೇವೆ. ಮಠದ ನಿರ್ಮಾಣ ಕಾರ್ಯವು ಪೂರ್ಣಗೊಂಡ ನಂತರ ಶಾಖಾ ಮಠಗಳನ್ನು ಸ್ಥಾಪಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹರಿಹರದ ಪಂಚಮಸಾಲಿ ಪೀಠಕ್ಕೆ 5 ಕೋಟಿ ಅನುದಾನ ಘೋಷಿಸಿದ್ದನ್ನು ಸ್ವಾಗತಿಸುತ್ತದೆ. ಸಮಾಜದಿಂದಾಗಲೀ, ಪೀಠದಿಂದಾಗಲೀ ಅನುದಾನ ನೀಡುವಂತೆ ಮನವಿ ಅರ್ಪಿಸಿರಲಿಲ್ಲ. ಸಿಎಂ ಸ್ವತಃ ಸಮಾಜಕ್ಕೆ ಐದು ಕೋಟಿ ಅನುದಾನ ನೀಡಿದ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

