ಡಾ. ಮಹಾಂತ ಸ್ವಾಮೀಜಿ ಪುಣ್ಯಸ್ಮರಣೆ
ದಾವಣಗೆರೆ: ಹರಿಹರದ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಗದ್ಗುರು ಪೀಠ- 2008 ಸ್ಥಿರ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಡಾ. ಮಹಾಂತ ಶಿವಾಚಾರ್ಯ ಸ್ವಾಮಿಗಳ ಪುಣ್ಯಸ್ಮರಣೆ ಕಾರ್ಯಕ್ರಮ ಫೆ.11ರಂದು ಹರಿಹರ ಸಮೀಪದ ಶಿವಮೊಗ್ಗ ರಸ್ತೆಯ ಹನಗವಾಡಿ ಕ್ರಾಸ್ನ ಶ್ರೀಮಠದಲ್ಲಿ ನಡೆಯಲಿದೆ. ಅಂದು ಮಧ್ಯಾಹ್ನ 12ಕ್ಕೆ ಸ್ಥಿರ ಪೀಠಾಧಿಪತಿ ಸಿದ್ದಲಿಂಗೇಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ಡಾ. ಮಹಾಂತ ಶಿವಾಚಾರ್ಯ ಸ್ವಾಮೀಜಿ ಸ್ಮರಣೋತ್ಸವವು ನಡೆಯಲಿದೆ. ಸರ್ವ ಭಕ್ತಾದಿಗಳು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಾಜವು ಕೋರಿದೆ.
ಸಮ್ಮೇಳನಕ್ಕೆ ಡಾ. ಎಚ್. ವಿಶ್ವನಾಥ
ವಿಜಾಪುರದಲ್ಲಿ ನಡೆಯುತ್ತಿರುವ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಕೋ. ಚನ್ನಬಸಪ್ಪ ಜೊತೆಗೆ ಸಂವಾದದಲ್ಲಿ ದಾವಣಗೆರೆಯ ಡಾ. ಎಚ್. ವಿಶ್ವನಾಥ್ ಪಾಲ್ಗೊಂಡಿದ್ದರು. ಕನ್ನಡ ದಾಸರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ನೆಲೆ ಒಂದು ಅಧ್ಯಯನ ಎಂಬ ವಿಷಯದ ಸಂಶೋಧನಾ ಪ್ರಬಂಧಕ್ಕೆ ಬೆಂವಿವಿ ಪಿಎಚ್ಡಿ ಪದವಿ ಡಾ. ಎಚ್. ವಿಶ್ವನಾಥ್ ಪಡೆದಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲೂ ಸಾಧನೆ ಮಾಡಿರುವ ಡಾ. ವಿಶ್ವನಾಥ ಇಲ್ಲಿನ ಗಾಂಧಿ ನಗರದ ಶ್ರೀ ಹರಳಯ್ಯ ವಿದ್ಯಾಸಂಸ್ಥೆಯ ರಾಮಪ್ಪ ಪಿಯು ಕಾಲೇಜು ಪ್ರಾಚಾರ್ಯರಾಗಿದ್ದಾರೆ.
ವೀರಣ್ಣ ಮತ್ತಿಕಟ್ಟಿ ಶಾಮನೂರು ಭೇಟಿ
ಕೆಪಿಸಿಸಿ ಪ್ರಚಾರ ಸಮಿತಿಗೆ ಆಯ್ಕೆಯಾದ ವೀರಣ್ಣ ಮತ್ತಿಕಟ್ಟಿ ಪಕ್ಷದ ಖಜಾಂಚಿ, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪನವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ದಾವಣಗೆರೆಯ ಡಾ. ಶಾಮನೂರು ನಿವಾಸಕ್ಕೆ ಭೇಟಿ ನೀಡಿದ್ದ ವೀರಣ್ಣ ಮತ್ತಿಕಟ್ಟೆ ತಮ್ಮ ನಾಯಕನೊಂದಿಗೆ ಚರ್ಚಿಸಿದರು. ವಿಧಾನ ಪರಿಷತ್ ಸದಸ್ಯ ಆರ್.ವಿ. ವೆಂಕಟೇಶ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ, ಮಹಾಸಭಾ ಜಿಲ್ಲಾಧ್ಯಕ್ಷ ಎಂ. ಶಿವಕುಮಾರ ಹಾಜರಿದ್ದರು.
ಗಲ್ಲು: ಸ್ವಾಗತ
ಸಂಸತ್ ಮೇಲೆ ದಾಳಿ ನಡೆಸಿದ್ದ ಉಗ್ರ ಅಫ್ಜಲ್ ಗುರುಗೆ ಗಲ್ಲು ಶಿಕ್ಷೆ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷ ಎಚ್.ಕೆ. ಮುಷರಫ್ ಸ್ವಾಗತಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

