20 ರಂದು ರಾಷ್ಟ್ರ ಮಟ್ಟದ ಮುಷ್ಕರ

Updated on: 

ದಾವಣಗೆರೆ: ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂಪಡೆಯುವ ಜೊತೆಗೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಫೆ.20ರಿಂದ ಎರಡು ದಿನಗಳ ಕಾಲ ದೇಶಾದ್ಯಂತ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಟಿಯುಸಿ ರಾಜ್ಯ ಕಾರ್ಯಾಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ, ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ, ಕಾರ್ಮಿಕರ ವಿರೋಧಿ ನೀತಿಗಳನ್ನು ತಕ್ಷಣ ಕೈಬಿಡುವಂತೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ಎರಡು ದಿನಗಳ ಮುಷ್ಕರ ಸಂಘಟಿಸಲಾಗಿದೆ ಎಂದರು. ಕಾರ್ಮಿಕ ಮುಖಂಡರಾದ ಕೆ.ಎಲ್. ಭಟ್, ಆರ್.ಎಸ್. ತಿಪ್ಪೇಸ್ವಾಮಿ, ಆವರಗೆರೆ ಚಂದ್ರು, ಆನಂದರಾಜ, ಆವರಗೆರೆ ಎಚ್.ಜಿ. ಉಮೇಶ, ಷಣ್ಮುಖಪ್ಪ ಇತರರು ಇದ್ದರು.
ಎಲ್ಲಾ ವಾರ್ಡ್‌ಗಳಿಗೂ ಕೆಜೆಪಿ ಸ್ಪರ್ಧೆ
ಹರಪನಹಳ್ಳಿ: ತಾಲೂಕಿನಲ್ಲಿ ರು.5 ಸಾವಿರ ಕರ್ನಾಟಕ ಜನತಾ ಪಕ್ಷದ ಸದಸ್ಯತ್ವ ನೋಂದಾಹಿಸುವ ಗುರಿ ಹೊಂದಲಾಗಿದೆ. ಈಗಾಗಲೇ 5 ಸಾವಿರ ಸದಸ್ಯತ್ವ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ದಾವಣಗೆರೆ ಜಿಲ್ಲಾ ಕೆಜೆಪಿ ಸಂಚಾಲಕ ಬಿ.ಎಸ್. ಜಗದೀಶ ತಿಳಿಸಿದ್ದಾರೆ.  
ಅವರು ಪಟ್ಟಣದ ಪಿಕಾರ್ಡ್ ಬ್ಯಾಂಕ್ ವೃತ್ತದಲ್ಲಿ ಇರುವ ಕೆಜೆಪಿ ಕಚೇರಿಯಲ್ಲಿ ಶುಕ್ರವಾರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುರಸಭೆ ಚುನಾವಣೆಗೆ ಸಿದ್ಧತೆ ನಡೆದಿದೆ. ಎಲ್ಲಾ 27 ವಾರ್ಡ್‌ಗಳಿಗೂ ಪಕ್ಷದಿಂದ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com