5 ಕೋಟಿ ವೆಚ್ಚದ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ
ಚನ್ನಗಿರಿ: ಪಟ್ಟಣದ ಅಭಿವೃದ್ಧಿಗಾಗಿ ನಗರೋತ್ತಾನ ಯೋಜನೆಯಲ್ಲಿ 5 ಕೋಟಿ ವೆಚ್ಚದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರವೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.
ಸೋಮವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ 8 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಹೈಟೆಕ್ ಶೌಚಾಲಯ, ಸಂತೇ ಮೈದಾನದಲ್ಲಿ ನಿರ್ಮಿಸಿರುವ ರು.2 ಲಕ್ಷ ವೆಚ್ಚದ 25 ಚಿಕನ್ ಸ್ಟಾಲ್ ವಾಣಿಜ್ಯ ಸಂಕೀರ್ಣಗಳ ಉದ್ಘಾಟನೆ ನೆರವೇರಿಸಿ ನಂತರ ಮಾತನಾಡಿ, ಪಟ್ಟಣದ ಅಭಿವೃದ್ಧಿಯಲ್ಲಿ ಪ.ಪಂ.ನ ಸದಸ್ಯರು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ವಾಣಿಜ್ಯ ಸಂಕೀರ್ಣಗಳಲ್ಲಿಯೇ ಚಿಕನ್, ಮಟನ್, ಮೀನುಗಳು ಇವುಗಳ ವ್ಯಾಪಾರ ಆಗಬೇಕು. ಬೇರೆ ಕಡೆ ಎಲ್ಲಿಯೂ ಮಾಂಸ ಮಾರಾಟದ ಅಂಗಡಿಗಳಿರಬಾರದು ಈ ಬಗ್ಗೆ ಪ.ಪಂ.ಅಧಿಕಾರಿಗಳು ಗಮನಹರಿಸಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಪ.ಪಂ. ಅಧ್ಯಕ್ಷೆ ಪುಷ್ಪಲತಾ ಜಗದೀಶ್ ವಹಿಸಿ ಮಾತನಾಡಿದರು. ಸಮಾರಂಭದಲ್ಲಿ ಸದಸ್ಯ ಕೆಪಿಎಂ ಶಿವಲಿಂಗಯ್ಯ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷ ರೇವಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಲಕ್ಷ್ಮೀ, ಸದಸ್ಯರಾದ ರಾಜಪ್ಪ, ಚಿಕ್ಕಪ್ಪ, ಭಾರತಿ ಪ್ರಸಾದ್, ಶಬ್ಬೀರ್ ಬಾನ್, ಶಿವಕುಮಾರ್, ಅಸ್ಲಾಂಬೇಗ್, ಬತ್ತುಲ್ಲಾಭಿ, ಲಕ್ಷ್ಮೀ ರುದ್ರೋಜಿರಾವ್, ಮಂಜಪ್ಪ, ರೆಹಮತ್ ಉಲ್ಲಾ ಖಾನ್, ಬಶೀರುನ್ನಿಸ್ಸಾ, ಮುಖ್ಯಾಧಿಕಾರಿ ಪರಮೇಶ್, ಅಭಿಯಂತರ ಹಾಲೇಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

