ದಾವಣಗೆರೆ

ನಾಳೆ ರಾಷ್ಟ್ರಮಟ್ಟದ ವಿಚಾರ ಸಂಕಿರಣ

Published On :

ದಾವಣಗೆರೆ: ಮಾನವ ಕಲ್ಯಾಣದಲ್ಲಿ ಜೈವಿಕ ತಂತ್ರಜ್ಞಾನ ವಿಷಯವಾಗಿ ಯುಜಿಸಿ ಪ್ರಾಯೋಜಿತ ರಾಷ್ಟ್ರಮಟ್ಟದ  ವಿಚಾರ ಸಂಕಿರಣ ಫೆ.1ರು.ರಂದು ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ ಎಂದು ಪ್ರಾಚಾರ್ಯ ಪ್ರೊ.ಕೆ.ಎಸ್. ಹನುಮಂತಪ್ಪ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 10.ರು.0ಕ್ಕೆ ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯ ಅಥಣಿ ಎಸ್. ವೀರಣ್ಣ ವಿಚಾರಸಂಕಿರಣ ಉದ್ಘಾಟಿಸಲಿದ್ದು, ಪ್ರೊ.ಕೆ.ಎಸ್. ಹನುಮಂತಪ್ಪ ಅಧ್ಯಕ್ಷತೆ ವಹಿಸುವರು ಎಂದರು.
ಕರ್ನಾಟಕ ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ಹಾಗೂ ಜೈವಿಕ ತಂತ್ರಜ್ಞಾನ ವಿಭಾಗದ ಮಾಜಿ ಮುಖ್ಯಸ್ಥ ಡಾ.ಜಿ.  ಶಿವಕುಮಾರಸ್ವಾಮಿ, ಸಸ್ಯ ಜೈವಿಕ ತಂತ್ರಜ್ಞಾನ- ಸಮಸ್ಯೆಗಳು ಹಾಗೂ ದೃಷ್ಟಿಗಳು ವಿಷಯವಾಗಿ ಮಾತನಾಡುವರು.
ಬಾಪೂಜಿ ವಿದ್ಯಾ ಸಂಸ್ಥೆ ನಿರ್ದೇಶಕ ಡಾ.ಎಂ.ಜಿ. ಈಶ್ವರಪ್ಪ, ಬಿಐಇಟಿ ಕಾಲೇಜು ನಿರ್ದೇಶಕ ಪ್ರೊ.ವೈ.  ವೃಷಭೇಂದ್ರಪ್ಪ, ಡಾ.ವಿ. ರಾಮಸ್ವಾಮಿ, ರಾಜ್ಯ ವಿವಿಗಳು ಮತ್ತು ಪದವಿ ಕಾಲೇಜುಗಳ ಅಧ್ಯಾಪಕರ ಸಂಘಗಳ  ಒಕ್ಕೂಟದ ಅಧ್ಯಕ್ಷ ಪ್ರೊ.ಸಿ.ಎಚ್. ಮುರಿಗೇಂದ್ರಪ್ಪ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು ಎಂದರು.
ಕಾಲೇಜಿನ ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಸುಜಯಾ ಕುಮಾರ, ಪ್ರಭಾ ಮರಡಿ, ಶಕುಂತಲಾ, ರೇಖಾ ರಮೇಶ, ರೂಪಾ ಇದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.