ದಾವಣಗೆರೆ

ಶಾಲೆಗಳಲ್ಲಿ ವಿದ್ಯಾರ್ಥಿಗಳೇ ಕಸ ಗುಡಿಸುವ ಸ್ಥಿತಿ

Published On :

ದಾವಣಗೆರೆ: ಜಿಲ್ಲೆಯ ಅನೇಕ ಶಾಲೆಗಳಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರೇ ಶಾಲೆ, ತರಗತಿ ಕೊಠಡಿಯ ಕಸ ಹೊಡೆಯುತ್ತಿರುವುದು ಕಂಡು ಬರುತ್ತಿದೆ. ತಕ್ಷಣ ಇಂತಹ ಘಟನೆಗಳು ಮರುಕಳಿಸದಂತೆ ಶಿಕ್ಷಣಾಧಿಕಾರಿಗಳು ಗಮನ ಹರಿಸಬೇಕು ಎಂದು ಜಿಪಂ ಅಧ್ಯಕ್ಷೆ ಶೀಲಾ ಗದ್ದಿಗೇಶ ಸೂಚಿಸಿದರು.
ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹುತೇಕ ಶಾಲೆಗಳಲ್ಲಿ ಶಾಲಾ ವಿದ್ಯಾರ್ಥಿಗಳೇ ಕಸ ಗುಡಿಸುವ ಸ್ಥಿತಿ ಇದ್ದು, ಶಾಲಾಭಿವೃದ್ಧಿ ಸಮಿತಿ ಅನುದಾನದಲ್ಲಿ ಅಗತ್ಯವಿರುವಂತಹ ಶಾಲೆಗಳಲ್ಲಿ ಕಸ ಹೊಡೆಯಲು ಒಬ್ಬರನ್ನು ನೇಮಿಸಿಕೊಂಡು, ಮಕ್ಕಳು ಕಸ ಗುಡಿಸುವುದನ್ನು ತಪ್ಪಿಸಿ ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವಂತಹ ಬೈಸಿಕಲ್, ಪೀಠೋಪಕರಣ, ಅಕ್ಷರದಾಸೋಹ, ಶೌಚಾಲಯ ನಿರ್ಮಾಣ, ಕುಡಿಯುವ ನೀರು ಮತ್ತಿತರೆ ಸೌಲಭ್ಯ ಕಲ್ಪಿಸಿ ಎಲ್ಲ ಕಾಮಗಾರಿಗಳನ್ನು ಮಾರ್ಚಿಯೊಳಗೆ ಪೂರ್ಣಗೊಳಿಸಿ, ಜಿಪಂಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಸೌಲಭ್ಯ ಕಲ್ಪಿಸಿ: ಸಿಇಓ ಎ.ಬಿ. ಹೇಮಚಂದ್ರ ಮಾತನಾಡಿ, ಎಸ್‌ಡಿಎಂಸಿ ಅನುದಾನದಲ್ಲಿ ಆದ ಕಾರ್ಯಗಳ ಮಾಹಿತಿ ಮಾತ್ರ ವರದಿಯಲ್ಲಿ ತೋರಿಸಿ. ಆಗದಂತಹ ಅಪೂರ್ಣ ಕಾಮಗಾರಿಗಳ ಮಾಹಿತಿಯನ್ನು ಕೆಲಸ ಪೂರ್ಣಗೊಂಡ ನಂತರ ವರದಿಯಲ್ಲಿ ನಮೂದಿಸಿ. ಶಾಲೆಗಳಲ್ಲಿ ಮಕ್ಕಳಿಗೆ ಸಮಸ್ಯೆಯಾಗದಂತೆ ನೀರು, ಶೌಚಾಲಯ ಮತ್ತಿತರೆ ಸೌಲಭ್ಯ ಕಲ್ಪಿಸಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ.ಆರ್. ಸುಮಿತ್ರಾದೇವಿ ಮಾತನಾಡಿ, ರಾಜ್ಯಾದ್ಯಂತ ವೈದ್ಯರ ಸಂಘಟನೆಗಳಿಂದ ಮುಷ್ಕರ ನಡೆಸಲಾಗುತ್ತಿದೆ. ದಾವಣಗೆರೆ ಜಿಲ್ಲೆಯ ವೈದ್ಯರು ಮುಷ್ಕರದಲ್ಲಿ ಭಾಗಿಯಾಗಿಲ್ಲ. ಎಂದಿನಂತೆಯೇ ತಮ್ಮ ಚಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದರು.
ಅಲ್ಲದೇ, ಜಿಲ್ಲೆಯ ಯಾವುದೇ ಭಾಗದಲ್ಲೂ ವೈದ್ಯರ ಸೇವೆಯಲ್ಲಿ ಸಮಸ್ಯೆಯಾಗಿಲ್ಲ. ರೋಗಿಗಳಿಗೆ ತೊಂದರೆಯಾಗದ ರೀತಿಯಲ್ಲಿ ವೈದ್ಯರು, ಶುಶ್ರೂಷಕರು ನಮ್ಮ ಮನವಿಗೆ ಸ್ಪಂದಿಸಿ, ಕೆಲಸವನ್ನೂ ಮಾಡುತ್ತಿದ್ದಾರೆ ಎಂದು ಡಿಎಚ್‌ಓ ಸಭೆಯ ಗಮನಕ್ಕೆ ತಂದರು. ಜಿಲ್ಲಾಸ್ಪತ್ರೆ ಅಧೀಕ್ಷಕ ಡಾ. ಟಿ. ಪರಶುರಾಮಪ್ಪ ಸಹ ಧ್ವನಿಗೂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.