ದಾವಣಗೆರೆ

ಕಾಂಗ್ರೆಸ್ ಅಭ್ಯರ್ಥಿ ಬಹುತೇಕ ನಾನೇ: ಮಹಿಮಾ

Published On :

ಚನ್ನಗಿರಿ: ಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಹುತೇಕ ನಾನೇ ಆಗಲಿದ್ದೇನೆ ಎಂದು ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಹೇಳಿದರು.  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ನಾಯಕರು ಪಕ್ಷದ ಸಂಘಟನೆಗಾಗಿ ಚನ್ನಗಿರಿ ಕ್ಷೇತ್ರದಲ್ಲಿ 'ಕಾಂಗ್ರೆಸ್‌ಗೆ ಬನ್ನಿ, ಬದಲಾವಣೆ ತನ್ನಿ' ಎಂಬ ಕಾರ್ಯಕ್ರಮವನ್ನು ಮಾಡಲು ಸೂಚನೆ ನೀಡಿದ್ದ ಮೇರೆಗೆ ಮುಂದಿನ ವಾರದಿಂದ ಜಿಲ್ಲಾ ಮತ್ತು ರಾಜ್ಯ ಮಟ್ಟದ ನಾಯಕರ ಜೊತೆಗೂಡಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ  ಕಾರ್ಯಕ್ರಮವನ್ನು ನಡೆಸುತ್ತಾ ಕಾಂಗ್ರೆಸ್ ಪಕ್ಷಕ್ಕೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಚಾರ ನಡೆಯಲಿದೆ ಎಂದು ತಿಳಿಸಿದರು.
ಇದೇ ತಿಂಗಳ 16-17ರಂದು ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಬೆಂಗಳೂರಿನಲ್ಲಿ ಪಕ್ಷದ ಉನ್ನತ ಮಟ್ಟದ ಸಭೆ ನಡೆಯಲಿದ್ದು ಎಚ್ಚರಿಕೆಯಿಂದ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.