ಸಂಪೂರ್ಣ ಕುಸಿದ ಆಡಳಿತ ಯಂತ್ರ
ಚನ್ನಗಿರಿ: ರಾಜ್ಯ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಆಡಳಿತ ದುರುಪಯೋಗವಾಗುತ್ತಿದೆ ಎಂದು ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿಧಾನಸಭಾ ಚುನಾವಣೆಯ ಸಮಯ ಹತ್ತಿರ ಬರುತ್ತಿದೆ. ಚುನಾವಣೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿರುವ ಬಿಜೆಪಿ ಪಕ್ಷದ ಜನಪ್ರತಿನಿಧಿಗಳು ಸುಳ್ಳಿನ ಕಂತೆಯ ಬಜೆಟನ್ನು ಮಂಡಿಸಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದರು.
ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರವನ್ನು ಹಿಡಿಯಲಿದೆ. ಆ ನಿಟ್ಟಿನಲ್ಲಿ ರಾಜ್ಯದ ನಾಯಕರು ಪಕ್ಷದ ಬಲವಾದ ಸಂಘಟನೆಗಾಗಿ ಕಾರ್ಯತಂತ್ರ ರೂಪಿಸುತ್ತಿದೆ. ಅದರಂತೆ 'ಕಾಗ್ರೆಸ್‌ಗೆ ಬನ್ನಿ, ಬದಲಾವಣೆ ತನ್ನಿ' ಎಂಬ ಕಾರ್ಯಕ್ರಮವನ್ನು ಚನ್ನಗಿರಿ ಕ್ಷೇತ್ರದಲ್ಲಿ ಮುಂದಿನ ವಾರದಿಂದ ಆರಂಭಿಸುತ್ತಿರುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ರಾಜಕಾರಣಿಗಳು ಭಾಗವಹಿಸುವರು ಎಂದರು.
ತಾಲೂಕು, ಜಿಲ್ಲೆ ಮತ್ತು ರಾಜ್ಯದಲ್ಲಿ ಈ ಹಿಂದೆ ನನ್ನ ತಂದೆ ಜೆ.ಎಚ್. ಪಟೇಲ್‌ರ ಜೊತೆ ಗುರುತಿಸಿಕೊಂಡಿರುವ ನಾಯಕರೆಲ್ಲ ನನ್ನ ಜೊತೆಯಲ್ಲಿ ಬರುತ್ತಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಅಭೀಬುಲ್ಲಾ, ಎ.ಎಸ್. ಬಸವರಾಜಪ್ಪ, ಪ್ರವೀಣ್‌ಕುಮಾರ್ ಜೈನ್, ದೇವರಹಳ್ಳಿ ಭೋಜರಾಜ್, ಗೌಡ್ರ ಮುರುಗೇಂದ್ರಪ್ಪ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

