ಚನ್ನಗಿರಿ: ತಾಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ಫೆ.20ರಂದು ಇಲ್ಲಿನ ವಿಠ್ಠಲ ರುಕುಮಾಯಿ ಕಲ್ಯಾಣ ಮಂದಿರದಲ್ಲಿ ಚನ್ನಗಿರಿ ಪಟ್ಟಣ ಪಂಚಾಯಿತಿಯ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ತುರ್ತು ಸಭೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಭೆಗೆ ಮಾಜಿ ಶಾಸಕರಾದ ವಡ್ನಾಳ್ ರಾಜಣ್ಣ, ಮಹಿಮಾ ಜೆ. ಪಟೇಲ್ ಭಾಗವಹಿಸಲಿದ್ದಾರೆ. ವೀಕ್ಷಕರಾಗಿ ಕೆಪಿಸಿಸಿ ಸದಸ್ಯ ಡಿ. ಬಸವರಾಜ್ ಭಾಗವಹಿಸುವರು ಎಂದು ತಿಳಿಸಿದ್ದಾರೆ. ಇಂತಹ ಮಹತ್ವದ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಿಎಸ್ಆರ್ ಅಭ್ಯರ್ಥಿಗಳ ನೇಮಕ
ಚನ್ನಗಿರಿ: ಪಟ್ಟಣ ಪಂಚಾಯಿತಿ ಚುನಾವಣೆಗೆ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಪಟ್ಟಣದ 19 ವಾರ್ಡ್ಗಳಿಗೂ ಅಭ್ಯರ್ಥಿಗಳನ್ನು ನೇಮಿಸಲು ಸಿದ್ಧವಾಗಿದೆ ಎಂದು ತಾಲೂಕು ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಕೆ. ಅಮೀರ್ ಅಹಮ್ಮದ್ ತಿಳಿಸಿದ್ದಾರೆ.
ಪಕ್ಷದ ಸಂಸ್ಥಾಪಕ ಅಧ್ಯಕ್ಷ ಶ್ರೀರಾಮುಲು, ಪಟ್ಟಣ ಪಂಚಾಯಿತಿ ಚುನಾವಣೆಗೆ ಪಕ್ಷ ಸಿದ್ಧಗೊಂಡಿದೆ ಎಂದು ತಿಳಿಸಿದರು.
ಅಪೇಕ್ಷೆ ಉಳ್ಳ ಅಭ್ಯರ್ಥಿಗಳು ಪಕ್ಷದ ನಿಲವಿಗೆ ಬದ್ಧರಾಗಿ ಚುನಾವಣೆಗೆ ಸಿದ್ದರಾಗಬೇಕು ಎಂದು ತಿಳಿಸಿದ್ದು, ಬಿಎಸ್ಆರ್ ಪಕ್ಷ ಯಾವುದೇ ಪಕ್ಷದ ಜೊತೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳದೆ ಸ್ವತಂತ್ರವಾಗಿ ಚುನಾವಣೆ ಎದುರಿಸಲಿದೆ ಎಂದು ತಿಳಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು, ಜಿಲ್ಲಾ ಸಂಚಾಲಕರು, ಕೆ.ಜಿ. ಲೋಹಿತ್ ಕುಮಾರ್ ದೂರವಾಣಿ ಸಂಖ್ಯೆ 9740771039 ಅಥವಾ ತಾಲೂಕು ಅಧ್ಯಕ್ಷ ಕೆ. ಅಮೀರ್ ಅಹಮ್ಮದ್, ದೂರವಾಣಿ ಸಂಖ್ಯೆ 9880899909 ಸಂಪರ್ಕಿಸಿ.