ಕಾಂಗ್ರೆಸ್ ಕಾರ್ಯಕರ್ತರ ಸಭೆ

Updated on: 

ಚನ್ನಗಿರಿ: ತಾಲೂಕಿನಲ್ಲಿ ಕಾಂಗ್ರೆಸ್ ಬಲಿಷ್ಠವಾಗಿ ಬೆಳೆಯುತ್ತಿದ್ದು, ಮುಂದಿನ ದಿನದಲ್ಲಿ ಬರುವ ಪಟ್ಟಣ ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಎಂದು ಮಾಜಿ ಶಾಸಕ ವಡ್ನಾಳ್ ರಾಜಣ್ಣ ಹೇಳಿದರು.
 ಅವರು ಮಂಗಳವಾರ ಸಂಜೆ 16ನೇ ವಾರ್ಡ್‌ನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಕಾಂಗ್ರೆಸ್ ವರ್ಚಸ್ಸು ದಿನದಿಂದ ದಿನಕ್ಕೆ ವೃದ್ಧಿಸುತ್ತಿದ್ದು, ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಬರುವಂತಹ ಎಲ್ಲರನ್ನೂ ಪಕ್ಷ ಸ್ವಾಗತಿಸುತ್ತದೆ ಎಂದು ತಿಳಿಸಿದರು.
 ಇದೇ ಸಂದರ್ಭದಲ್ಲಿ ಬಿಜೆಪಿ ತೊರೆದ ಪಪಂ ಮಾಜಿ ಅಧ್ಯಕ್ಷ ಪಿ.ಎನ್. ಕೃಷ್ಣ ಉಪಾಧ್ಯ, ಸಿಕೆಎಚ್. ಮಹೇಶ್ವರಪ್ಪ, ಇವರು ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
   ಕಾಂಗ್ರೆಸ್ ಮುಖಂಡ ಶಾಮರಾಮ್, ರಾಮಚಂದ್ರ ಪ್ರಜಾಪತ್, ಪಿ.ಆರ್. ಮಂಜುನಾಥ್, ಎಂ. ಯೋಗೀಶ್, ಲಲಿತಮ್ಮ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.
--

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com