ದಾವಣಗೆರೆ:ದಾವಣಗೆರೆಯ ಎಲ್ಲಾ 41 ವಾರ್ಡ್ಗಳಲ್ಲೂ ಆಧಾರ ಕಾರ್ಡ್ ಕೇಂದ್ರಗಳನ್ನು ಸ್ಥಾಪಿಸುವಂತೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ಒತ್ತಾಯಿಸಿದ್ದಾರೆ. ಅಂಚೆ ಕಚೇರಿಯಲ್ಲಿ ಆದಾರ ಕಾರ್ಡ್ಗಾಗಿ ಮುಂಜಾನೆಯಿಂದಲೇ ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ನಿತ್ಯ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಸರದಿಯಲ್ಲಿ ನಿಲ್ಲಲು ಜನತೆಗೂ ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರತಿ ವಾರ್ಡ್ಗೂ ಆದಾರ ಕಾರ್ಡ್ ಕೇಂದ್ರ ಸ್ಥಾಪಿಸಿದಲ್ಲಿ ಜನರಿಗೆ ಅನುಕೂಲವಾಗುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.